ಕರ್ನಾಟಕ

karnataka

ETV Bharat / state

ವಿವಾಹಿತೆಯನ್ನು ಲೈಂಗಿಕವಾಗಿ ಬಳಸಿಕೊಂಡು ₹7 ಲಕ್ಷಕ್ಕೆ ಬೇಡಿಕೆ ಆರೋಪ: ಕಾರವಾರ ಪೊಲೀಸರಿಂದ ಆರೋಪಿ ಸೆರೆ - ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ

ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.

blackmail-of-married-woman-by-using-sexually-accused-arrested-in-karwar
ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬ್ಲ್ಯಾಕ್​ಮೇಲ್​ : ಆರೋಪಿ ಬಂಧನ

By ETV Bharat Karnataka Team

Published : Oct 1, 2023, 9:32 PM IST

ಕಾರವಾರ (ಉತ್ತರ ಕನ್ನಡ): ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಆರ್ಲಪದವು ನಿವಾಸಿ, ಮಾಜಿ ಗ್ರಾ.ಪಂ ಸದಸ್ಯ ಪ್ರಶಾಂತ್​ ಭಟ್​ ಮಾಣಿಲ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಸಂತ್ರಸ್ತೆಯು ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮಹಿಳೆ ನೀಡಿರುವ ದೂರಿನಂತೆ, ಆರೋಪಿ ಪ್ರಶಾಂತ್ ಭಟ್ ಸಂತ್ರಸ್ತ ಮಹಿಳೆಗೆ ಸಂಗೀತದಲ್ಲಿ ಆಸಕ್ತಿ ಇರುವುದನ್ನು ಗಮನಿಸಿ ಕ್ಲಬ್ ಹೌಸ್ ಆ್ಯಪ್‌ನಲ್ಲಿ ಪರಿಚಯಿಸಿಕೊಂಡಿದ್ದ. ಬಳಿಕ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಚಾಟ್ ಮಾಡಿದ್ದ. ಇಬ್ಬರ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ.

2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗುವಂತೆ ಹೇಳಿದ್ದಾನೆ. ಈ ಸಂಬಂಧ ಮಹಿಳೆ ಶಿರಸಿಯ ಮಾರಿಕಾಂಬಾ ದೇವಾಲಯದಲ್ಲಿ ಆರೋಪಿಯನ್ನು ಭೇಟಿಯಾಗಿದ್ದರು. ಬಳಿಕ ಆರೋಪಿ ಮಹಿಳೆಯನ್ನು ಖಾಸಗಿ ಲಾಡ್ಜ್ ಒಂದಕ್ಕೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಅಲ್ಲದೇ ಮತ್ತೊಮ್ಮೆ ಅದೇ ಲಾಡ್ಜ್​ಗೆ ಕರೆದೊಯ್ದು ಎರಡನೇ ಬಾರಿಗೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಅಲ್ಲದೆ ಆರೋಪಿಯು ಮಹಿಳೆಯೊಂದಿಗಿನ ಖಾಸಗಿ ಕ್ಷಣಗಳನ್ನು ಮೊಬೈಲಿನಲ್ಲಿ ಕ್ಲಿಕ್ಕಿಸಿಕೊಂಡಿದ್ದು, ವೈರಲ್​ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಈ ಕುರಿತು ಮಹಿಳೆಯು ಒಮ್ಮೆ 25 ಸಾವಿರ ರೂ ಹಣ ನೀಡಿದ್ದಾರೆ. ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಒಡ್ಡಿ 7 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೇ ಖಾಸಗಿ ಕ್ಷಣಗಳ ಫೋಟೋಗಳನ್ನು ಸಂತ್ರಸ್ತ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರವಾರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ:ಕಳೆದ ಸೆಪ್ಟೆಂಬರ್​ ತಿಂಗಳಿನಲ್ಲಿ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಲ್ಯಾಬ್​ ಟೆಕ್ನೀಷಿಯನ್​ನನ್ನು ಕೊಡಿಗೆಹಳ್ಳಿ ಪೊಲೀಸ್​ ಠಾಣೆ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ಅಶೋಕ್​ ಎಂದು ಗುರುತಿಸಲಾಗಿತ್ತು. ಆರೋಪಿಯು ಹೆಬ್ಬಾಳ ಖಾಸಗಿ ಆಸ್ಪತ್ರೆಯ ಸಿಟಿ ಸ್ಕ್ಯಾನ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿತ್ತು. ವೃದ್ಧೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ :ಬೆಂಗಳೂರು: ಹುಟ್ಟುಹಬ್ಬ ಆಚರಣೆ ವೇಳೆ ವಿದ್ಯುತ್ ತಂತಿ ತಗುಲಿ ಬಲೂನ್ ಸ್ಫೋಟ; ಐವರು ಗಂಭೀರ

ABOUT THE AUTHOR

...view details