ಭಟ್ಕಳ:ರಾಮರಾಜ್ಯದ ಪರಿಕಲ್ಪನೆಯಲ್ಲಿ ಹೊಸ ಸಂಸ್ಥೆಯೊಂದನ್ನು ಹುಟ್ಟು ಹಾಕುತ್ತೇವೆ. ಈ ಮೂಲಕ ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50 ಕ್ಷೇತ್ರಗಳಲ್ಲಿ ಸಾಧು- ಸಂತರು ಸ್ಪರ್ಧಿಸಲಿದ್ದಾರೆ ಎಂದು ನಾಮಧಾರಿ ಕುಲಗುರು, ಉಜಿರೆ ಶ್ರೀರಾಮ ಕ್ಷೇತ್ರದ ಮಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಘೋಷಿಸಿದ್ದಾರೆ.
ಭಟ್ಕಳದಲ್ಲಿ ನಡೆಯುತ್ತಿರುವ ಶ್ರೀಕ್ಷೇತ್ರ ಸಾರದಹೊಳೆ ಹಳೆಕೋಟೆ ಹನುಮಂತ ದೇವರ ಸಭಾ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಸುನೀಲ್ ನಾಯ್ಕ, ಮಾಜಿ ಶಾಸಕರಾದ ಜೆ. ಡಿ ನಾಯ್ಕ, ಆರ್. ಎನ್ ನಾಯ್ಕ ಇತರರ ಉಪಸ್ಥಿತಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಭಟ್ಕಳದಲ್ಲೇ ಬ್ರಹ್ಮಾನಂದರು ಈ ಪ್ರಯೋಗ ಮಾಡುತ್ತಾರೆ. ಚುನಾವಣೆ ಪ್ರಚಾರಕ್ಕೆ ನೀವ್ಯಾರು ಬೇಡ, ನನ್ನ 5 ಲಕ್ಷ ನಾಗಾಸಾಧುಗಳು ಬರುತ್ತಾರೆ ಎಂದರು.