ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ವೋಲ್ವೊ ಬಸ್ಸೊಂದು ರಸ್ತೆ ಪಕ್ಕದ ದಿಬ್ಬಕ್ಕೆ ಡಿಕ್ಕಿ ಹೊಡೆದು ಚಾಲಕ ಸೇರಿ ಪ್ರಯಾಣಿಕರು ಗಾಯಗೊಂಡ ಘಟನೆ ಕುಮಟಾ ತಾಲೂಕಿನ ದುಂಡುಕುಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ದಿಬ್ಬಕ್ಕೆ ಗುದ್ದಿದ ಖಾಸಗಿ ಬಸ್ - ಕಾರವಾರ ಖಾಸಗಿ ಬಸ್ ಅಪಘಾತ ಸುದ್ದಿ
ಕುಮಟಾ ತಾಲೂಕಿನ ದುಂಡುಕುಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ವೋಲ್ವೊ ಬಸ್ಸೊಂದು ರಸ್ತೆ ಪಕ್ಕದ ದಿಬ್ಬಕ್ಕೆ ಡಿಕ್ಕಿ ಹೊಡೆದು ಚಾಲಕ ಸೇರಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ದಿಬ್ಬಕ್ಕೆ ಗುದ್ದಿದ ಖಾಸಗಿ ಬಸ್
ಚಾಲಕ ಸುಭಾಷ್ ಹಳಬಾಳ ಕಾಲಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಬೈಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಅಪಘಾತವಾದ ದಿಬ್ಬದ ಪಕ್ಕದಲ್ಲಿಯೇ ವಿದ್ಯುತ್ ಕಂಬವಿದ್ದು, ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.