ಶಿರಸಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಎಸ್.ಬಿ.ಐ. ಸರ್ಕಲ್ ಬಳಿ ನಡೆದಿದೆ.
ಬಸ್ - ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು! - ಬಸ್-ಬೈಕ್ ನಡುವೆ ಡಿಕ್ಕಿ
ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿರಸಿಯ ಗಣೇಶ ನಗರದ ರವಿಚಂದ್ರ ವಡ್ಡರ್ (34) ಹಾಗೂ ಸುನೀಲ್ ಇಂದೂರ (26) ಮೃತರು.
ಬಸ್-ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು!
ಶಿರಸಿಯ ಗಣೇಶ ನಗರದ ರವಿಚಂದ್ರ ವಡ್ಡರ್ (34) ಹಾಗೂ ಸುನೀಲ ಇಂದೂರ (26) ಮೃತರು. ರವಿಚಂದ್ರ ತಂದೆ ಹನುಮಂತಪ್ಪ ಸೋಮವಾರ ನಸುಕಿನ ಜಾವ ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಹೂ ತರಲು ಇಬ್ಬರು ಮಾರುಕಟ್ಟೆಗೆ ತೆರಳುತ್ತಿದ್ದರು. ಈ ವೇಳೆ ಇನ್ನೊಂದು ರಸ್ತೆಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಬಸ್ ಅಡಿಗೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ.
ಸ್ಥಳಕ್ಕೆ ಡಿವೈಎಸ್ಪಿ ರವಿ ನಾಯ್ಕ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.