ಶಿರಸಿ:ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಮೋರಿಗೆ ಬಿದ್ದು, 30 ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉತ್ತರ ಕನ್ನಡದ ಶಿರಸಿ ತಾಲೂಕಿನ ಗೋಳಿಮಕ್ಕಿ ರಸ್ತೆ ಹಣಜಿಮನೆ ಬಳಿ ನಡೆದಿದೆ.
ಶಿರಸಿಯಲ್ಲಿ ಮೋರಿಗೆ ಬಿದ್ದ ಬಸ್; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು - bus
ಚಾಲಕನ ನಿಯಂತ್ರಣ ತಪ್ಪಿ ಬಸ್ ಮೋರಿಗೆ ಬಿದ್ದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
bus
ಎದುರುಗಡೆಯಿಂದ ಬರುತ್ತಿದ್ದ ವಾಹನ ತಪ್ಪಿಸುವ ಭರದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಮೋರಿಗೆ ಇಳಿದಿದೆ. ಈ ವೇಳೆ ಬಸ್ಸಿನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ನಂತರ ಕ್ರೇನ್ ಮೂಲಕ ಬಸ್ ಮೇಲೆತ್ತಲಾಗಿದ್ದು, ಪ್ರಯಾಣಿಕರನ್ನು ಸುರಕ್ಷತೆಯಿಂದ ಮನೆಗೆ ತಲುಪಿಸಲಾಗಿದೆ.