ಕರ್ನಾಟಕ

karnataka

ETV Bharat / state

ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್​, ನೈಟ್ ಕರ್ಫ್ಯೂ ಪರಿಹಾರವಲ್ಲ: ಸಿ.ಟಿ. ರವಿ - ನೈಟ್ ಕರ್ಪ್ಯೂ ಬಗ್ಗೆ ಸಿಟಿ ರವಿ ಪ್ರತಿಕ್ರಿಯೆ

ನಾನು ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಲಾಕ್‍ಡೌನ್ ಮತ್ತು ನೈಟ್ ಕರ್ಫ್ಯೂ ವಿಧಿಸಿದರೆ ಜನಸಾಮಾನ್ಯರಿಗೆ ಹೊರೆಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರರ್ಶಿ ಸಿ.ಟಿ. ರವಿ ಹೇಳಿದ್ದಾರೆ.

c-t-ravi
ಬಿಜೆಪಿ ರಾಷ್ಟ್ರೀಯ ನಾಯಕ ಸಿ. ಟಿ ರವಿ

By

Published : Jan 18, 2022, 9:25 PM IST

ಕಾರವಾರ: ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್​, ನೈಟ್ ಕರ್ಫ್ಯೂ ಪರಿಹಾರವಲ್ಲ. ಜನ ಸಮಾನ್ಯರು ನೂರಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ತನ್ನ ನಿರ್ಧಾರ ಬದಲಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಹೇಳಿದ್ದಾರೆ.

ಗೋವಾ ರಾಜ್ಯದ ಪಣಜಿಯಲ್ಲಿ ಹೇಳಿಕೆ ನೀಡಿದ ಅವರು, ನಾನು ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಲಾಕ್‍ಡೌನ್ ಮತ್ತು ನೈಟ್ ಕರ್ಫ್ಯೂ ವಿಧಿಸಿದರೆ ಜನಸಾಮಾನ್ಯರಿಗೆ ಹೊರೆಯಾಗಲಿದೆ ಎಂದು ಹೇಳಿದರು.

ಸರ್ಕಾರ ಇದರ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು. ಪರಿಸ್ಥಿತಿಯನ್ನು ಪರಾಮರ್ಶಿಸಿ ತಜ್ಞರ ಸಲಹೆ ಪಡೆದು ಸರ್ಕಾರ ಕ್ರಮ ತೆಗೆದುಕೊಳ್ಳಲು ನನ್ನ ಅಭ್ಯಂತರವಿಲ್ಲ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಹೇಳುವುದಾದರೆ ಲಾಕ್‍ಡೌನ್ ಹೇರಬಾರದು. ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು.

ಓದಿ:ತಾಯಿಯೊಂದಿಗೆ ಪುಣ್ಯ ಕ್ಷೇತ್ರಗಳಿಗೆ ಭೇಟಿ.. ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಸಾರಾ ಅಲಿ ಖಾನ್ ಪೋಸ್​

For All Latest Updates

ABOUT THE AUTHOR

...view details