ಭಟ್ಕಳ :ಭಟ್ಕಳ, ಶಿರಸಿಯಲ್ಲಿ ಇದೇ ಮೊದಲ ಬಾರಿಗೆ ಎಸ್.ಡಿ.ಪಿ.ಐ ಸಂಘಟನೆ ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ನಿಲ್ಲಿಸಲು ಸಿದ್ಧವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಗೆ ಸೆಡ್ಡು ಹೊಡೆಯಲು ಮುಂದಾಗಿದೆ.
ಭಟ್ಕಳ ಶಿರಸಿ ವಿಧಾನಸಭಾ ಕ್ಷೇತ್ರಕ್ಷೆ ಎಸ್.ಡಿ.ಪಿ.ಐ ನಿಂದಲೂ ಅಭ್ಯರ್ಥಿ ಕಣಕ್ಕೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸುನಿಲ್ ನಾಯ್ಕಗೆ ಸೆಡ್ಡು ಹೊಡೆಯಲು ಸಿದ್ಧವಾದ ಎಸ್.ಡಿ.ಪಿ.ಐ. ಕರಾವಳಿ ಭಾಗದಲ್ಲಿ ಕೋಮು ಸಂಘರ್ಷಗಳು ಹಲವು ಪಕ್ಷಗಳಿಗೆ ವರವಾದರೇ ಸಂಘಟನೆಗಳಿಗೆ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸಿಕೊಳ್ಳಲು ಸಹ ಸಹಕಾರಿಯಾಗುತ್ತಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣೆಗೂ ತಮ್ಮವರನ್ನು ನಿಲ್ಲಿಸುವಷ್ಟರ ಮಟ್ಟಿಗೆ ಬೆಳೆದಿವೆ.
ಭಟ್ಕಳ ಮತ್ತು ಶಿರಸಿ ಭಾಗದಲ್ಲಿ ಹಿಂದೂ ಸಂಘಟನೆಯಂತೆಯೇ ಎಸ್.ಡಿ.ಪಿ.ಐ ಹಾಗೂ ಪಿ.ಎಫ್.ಐ ಸಂಘಟನೆ ಸಹ ದೊಡ್ಡಮಟ್ಟದಲ್ಲಿ ಬೆಳೆದು ನಿಂತಿದ್ದು, ಗ್ರಾಮಪಂಚಾಯ್ತಿ, ಪುರಸಭೆಗಳಲ್ಲಿ ಎಸ್ಡಿಪಿಐ ತಮ್ಮವರನ್ನು ಕಣಕ್ಕಿಳಿಸಿ ಒಟ್ಟು 9 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು. ಇದೀಗ ಭಟ್ಕಳದಿಂದ ಎಸ್ ಡಿಪಿಐ ಜಿಲ್ಲಾಧ್ಯಕ್ಷ ತೋಫಿಕ್ ಬ್ಯಾರಿ ಅವರನ್ನು ಕಣಕ್ಕಿಳಿಸಲಿದ್ರೆ, ಶಿರಸಿಯಲ್ಲಿ ಹಿಂದೂ ಮುಖಂಡರನ್ನೇ ಅಖಾಡಕ್ಕಿಳಿಸಲು ಸಜ್ಜಾಗಿದೆ.
ಇನ್ನು, ಭಟ್ಕಳದಲ್ಲಿ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿ ಹೊಣೆ ಹೊತ್ತಿರುವ ಅಪ್ಸರ್ ಕೊಡ್ಲಿಪೇಟೆ ಅವರು ಉತ್ತರ ಕನ್ನಡ ಜಿಲ್ಲಾ ವಿಧಾನಸಭಾ ಕ್ಷೇತ್ರದ ಚುನಾವಣಾ ಸ್ಪರ್ಧಾಕಾಂಕ್ಷಿಗಳ ಸಭೆ ನಡೆಸಿ ಮಾತನಾಡಿದ ಅವರು, ಆಡಳಿತ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿಜೆಪಿಯ ಕಾರ್ಯಕರ್ತರ ಸಭೆಯಲ್ಲಿ ಹೇಳುವಂತೆ, ರಸ್ತೆ, ಸೇತುವೆ, ಮೇಲ್ಸೆತುವೆ ಇಂತಹ ಅಭಿವೃದ್ಧಿಯ ವಿಚಾರದಲ್ಲಿ ಚುನಾವಣೆಯನ್ನು ಎದುರಿಸುವುದು ಬೇಡ, ನಾವು ಲವ್ ಜಿಹಾದ್ ಹೆಸರಿನಲ್ಲಿ ಚುನಾವಣೆಗೆ ಹೋಗಬೇಕು. ಇವರು ಸರ್ಕಾರದ ಸಾಧನೆ, ಅಭಿವೃದ್ಧಿಯ ವಿಚಾರಗಳನ್ನು ಇಟ್ಟುಕೊಂಡು ಚುನಾವಣೆಗೆ ಹೋಗಬೇಕಿತ್ತು ಎಂದು ವ್ಯಂಗ್ಯವಾಡಿದರು.