ಶಿರಸಿ:ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಕಾರು- ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ, ಕಾರು ಚಾಲಕ ಪರಾರಿ - sirsi accident news
ಶಿರಸಿಯಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಬೈಕ್ ಸವಾರರಾದ ನೇಗಾರಿನ ಅನಂತ ಹೆಗಡೆ ಹಾಗೂ ಮನೋಜ್ ಹೆಗಡೆ ಎಂಬುವವರಿಗೆ ಗಾಯಗಳಾಗಿವೆ.
![ಕಾರು- ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ, ಕಾರು ಚಾಲಕ ಪರಾರಿ Car and bike collision](https://etvbharatimages.akamaized.net/etvbharat/prod-images/768-512-5668990-thumbnail-3x2-vid.jpg)
ದ್ರಿಚಕ್ರ ವಾಹನದಲ್ಲಿ ಇಬ್ಬರು ರಾಘವೇಂದ್ರ ಸರ್ಕಲ್ನಿಂದ ಹೋಗುತ್ತಿರುವಾಗ ಎದುರಿಗೆ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತಾಲೂಕಿನ ನೇಗಾರಿನ ಅನಂತ ಹೆಗಡೆ (19) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಹಿಂಬದಿ ಸವಾರ ಮನೋಜ್ ಹೆಗಡೆಗೂ (19) ಸಣ್ಣಪುಟ್ಟ ಗಾಯಗಳಾಗಿದೆ. ಅಪಘಾತ ನಡೆಯುತ್ತಿದ್ದಂತೆ ಮುಂಡಗೋಡಿನ ಮಳಗಿಯ ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಗಾಯಗೊಂಡ ಬೈಕ್ ಸವಾರರನ್ನು ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ನಗರದ ಟಿಎಸ್ಎಸ್ಗೆ ಕರೆದೊಯ್ಯಲಾಗಿದ್ದು, ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.