ಕರ್ನಾಟಕ

karnataka

ETV Bharat / state

ಲಾರಿ, ಕಾರು ಡಿಕ್ಕಿ : ಓರ್ವ ಸ್ಥಳದಲ್ಲಿಯೇ ಸಾವು, ನಾಲ್ವರಿಗೆ ಗಾಯ - ಡಿಕ್ಕಿ

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಾವರದಲ್ಲಿ ನಡೆದಿದೆ.

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ

By

Published : Mar 18, 2019, 1:30 PM IST

ಕಾರವಾರ: ಲಾರಿ ಹಾಗೂ ಕಾರಿನ‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಎಮ್ಮೆಪೈಲ್ ಬಳಿ ಇಂದು ನಡೆದಿದೆ.

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ

ಚಾಮರಾಜನಗರದ ಗುಂಡ್ಲುಪೇಟೆ ಮೂಲದ ವಿಜಯಕುಮಾರ(32) ಮೃತಪಟ್ಟ ದುರ್ದೈವಿ. ಗೋವಾದಿಂದ ಮೈಸೂರಿಗೆ ವಾಪಸ್ಸಾಗುತ್ತಿದ್ದ ಕಾರು ಹಾಗೂ ಭಟ್ಕಳದಿಂದ ಪೂನಾ ಕಡೆಗೆ ಹೋಗುತ್ತಿದ್ದ ಲಾರಿ ನಡುವೆ ಅವಘಡ‌ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ನಾಲ್ವರನ್ನು ತಕ್ಷಣ ಹೊನ್ನಾವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನು ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details