ಶಿರಸಿ:ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಇನ್ನಷ್ಟು ಉತ್ತಮ ಆಸ್ಪತ್ರೆಗಳ ಸೇರ್ಪಡೆಗೆ ಚಿಂತನೆ ನಡೆಸಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಕಾರ್ಡ್ ವಿತರಣೆ - ಆಯುಷ್ಮಾನ್ ಭಾರತ ಯೋಜನೆ
ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಇನ್ನಷ್ಟು ಉತ್ತಮ ಆಸ್ಪತ್ರೆಗಳ ಸೇರ್ಪಡೆಗೆ ಚಿಂತನೆ ನಡೆಸಲಾಗಿದೆ. ಆಸ್ಪತ್ರೆಗಳಲ್ಲಿರುವ ಕುಂದುಕೊರತೆಗಳನ್ನ ಗಮನಿಸಿ ಸರಿಪಡಿಸಲಾಗುವುದು. ಜೊತೆಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್ ವಿತರಣೆ ಹಾಗೂ ಆರೋಗ್ಯ ರಕ್ಷಾ ಸಾಮಾನ್ಯ ಸಮಿತಿ ಸಭೆಗೆ ಶಿರಸಿಯಲ್ಲಿ ಸ್ಪೀಕರ್ ಕಾಗೇರಿ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ಸಾಕಷ್ಟು ಜನಪರ ಯೋಜನೆ ಅನುಷ್ಠಾನ ಮಾಡುತ್ತಿದ್ದು, ಆಯುಷ್ಮಾನ್ ಭಾರತ ಯೋಜನೆ ಕೂಡ ಒಂದಾಗಿದೆ. ಆದರೆ, ಕೆಲ ಉತ್ತಮ ಆಸ್ಪತ್ರೆಗಳು, ಜನರು ಹೆಚ್ಚಾಗಿ ಬರುವ ಆಸ್ಪತ್ರೆಗಳು ಯೋಜನೆಯಿಂದ ಹೊರಗುಳಿದಿವೆ. ಅಂತಹ ಆಸ್ಪತ್ರೆಗಳನ್ನೂ ಸೇರಿಸಿಕೊಳ್ಳುವ ಚಿಂತನೆ ನಡೆಸಲಾಗಿದ್ದು, ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇನ್ನು ಆಸ್ಪತ್ರೆಗಳಲ್ಲಿರುವ ಕುಂದುಕೊರತೆಗಳನ್ನ ಗಮನಿಸಿ ಸರಿಪಡಿಸಲಾಗುವುದು. ಜೊತೆಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದ ಅವರು, ಕಾರ್ಯಕ್ರಮದ ವೇಳೆ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ ವಿತರಿಸಿದರು.