ಶಿರಸಿ : ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಜಿಲ್ಲೆಯ ಜೊಯಿಡಾ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯಿಂದ 3.75 ಲಕ್ಷ ರೂ. ಮೌಲ್ಯದ ಬಂಗಾರವನ್ನು ವಶಪಡಿಸಿಕೊಳ್ಳಲಾಗಿದೆ.
ಶಿರಸಿ: ಸರಗಳ್ಳ ಅರೆಸ್ಟ್, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ - Chains snatching accused arrest
ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಜೊಯಿಡಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
Arrest
ರಾಮನಗರದ ಕೃಷ್ಣಾ ಗಲ್ಲಿಯ ದೀಪಕ್ ಚಂದ್ರಕಾಂತ ಪಾಟ್ನೇಕರ್ ಬಂಧಿತ ಆರೋಪಿ. ಈತನ ವಿರುದ್ಧ ಮೂರು ಬಂಗಾರದ ಸುಲಿಗೆ ಪ್ರಕರಣಗಳು ದಾಖಲಾಗಿದ್ದು, ಹೆಚ್ಚಾಗಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ.
ಬಂಧಿತನಿಂದ 3.75 ಲಕ್ಷ ಮೌಲ್ಯದ 92.940 ಗ್ರಾಂ ಬಂಗಾರದ ಮೂರು ಸರಗಳನ್ನು ಹಾಗೂ 25 ಸಾವಿರ ಮೌಲ್ಯದ ದ್ವಿಚಕ್ರ ವಾಹನವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
Last Updated : Jul 12, 2020, 5:13 PM IST