ಕರ್ನಾಟಕ

karnataka

ETV Bharat / state

ಕಾರವಾರದಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯ ಉದ್ಘಾಟನೆ.. - ಮಕ್ಕಳ ಸ್ನೇಹಿ ನ್ಯಾಯಾಲಯ

ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ ಸೇರಿ ಇನ್ನಿತರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಲು ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಪ್ರತ್ಯೇಕ ನ್ಯಾಯಾಲಯ ಸ್ಥಾಪಿಸಲಾಗಿದೆ. ಅದು ಇಂದಿನಿಂದ ಕಾರ್ಯಾರಂಭಗೊಳ್ಳಲಿದೆ. ಇದರಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅನುಕೂಲವಾಗಲಿದೆ.

Child-friendly court
ಮಕ್ಕಳ ಸ್ನೇಹಿ ನ್ಯಾಯಾಲಯ

By

Published : Jan 25, 2020, 1:24 PM IST

ಕಾರವಾರ:ಮಕ್ಕಳ ಮೇಲಿನ ದೌರ್ಜನ್ಯ,ಲೈಂಗಿಕ ಕಿರುಕುಳ ಸೇರಿ ಇನ್ನಿತರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಲು ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಪ್ರತ್ಯೇಕ ನ್ಯಾಯಾಲಯ ಸ್ಥಾಪಿಸಲಾಗಿದೆ. ನ್ಯಾಯಮೂರ್ತಿ ಬಿ ಎ ಪಾಟೀಲ್ ನೂತನ ಕೋರ್ಟ್‌ನ ಇಂದು ಲೋಕಾರ್ಪಣೆಗೊಳಿಸಿದ್ದಾರೆ.

ಮಕ್ಕಳ ಸ್ನೇಹಿ ನ್ಯಾಯಾಲಯ ಉದ್ಘಾಟನೆ..

ನಗರದ ಹಳೆ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ನವೀಕರಣಗೊಂಡ ಕಟ್ಟಡದಲ್ಲಿ ಪ್ರಾರಂಭಿಸಲಾದ ನ್ಯಾಯಾಲಯವನ್ನು ನ್ಯಾಯಾಂಗ ಇಲಾಖೆ, ಲೋಕೋಪಯೋಗಿ, ಬಂದರು, ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ‌ ಸಂಯುಕ್ತಾಶ್ರಯದಲ್ಲಿ ನ್ಯಾ. ಬಿ ಎ ಪಾಟೀಲ್‌ ಲೋಕಾರ್ಪಣೆಗೊಳಿಸಿದರು.

ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ ಸೇರಿ ಇನ್ನಿತರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಲು ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಪ್ರತ್ಯೇಕ ನ್ಯಾಯಾಲಯ ಸ್ಥಾಪಿಸಲಾಗಿದೆ. ಅದು ಇಂದಿನಿಂದ ಕಾರ್ಯಾರಂಭಗೊಳ್ಳಲಿದೆ. ಇದರಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅನುಕೂಲವಾಗಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ವಿಪುಲ ಎಂ.ಬಿ ಪೂಜಾರಿ, ಜಿಲ್ಲಾ ವಕೀಲರ‌ ಸಂಘದ ಅಧ್ಯಕ್ಷ ಚಂದ್ರಶೇಖರ ಎಚ್. ನಾಯ್ಕ್​ ಸೇರಿದಂತೆ ಇನ್ನಿತರರು ಇದ್ದರು.

ABOUT THE AUTHOR

...view details