ಕಾರವಾರ:ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಮತ್ತು ರೈಲ್ವೆ, ಬ್ಯಾಂಕ್, ವಿಮೆ ಮುಂತಾದ ಉದ್ದಿಮೆಗಳ ಖಾಸಗೀಕರಣ ತಡೆಗೆ ಒತ್ತಾಯಿಸಿ ಸಿಐಟಿಯು ಮತ್ತು ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಕೇಂದ್ರದ ಜನವಿರೋಧಿ ನೀತಿಗೆ ಆಕ್ರೋಶ: ಹೆದ್ದಾರಿ ತಡೆದು ಪ್ರತಿಭಟನೆ - ಸಿಐಟಿಯು ಕಾರ್ಯಕರ್ತರ ಪ್ರತಿಭಟನೆ
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆಕೊಟ್ಟ ಅಖಿಲ ಭಾರತ ಮುಷ್ಕರದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಸಿಐಟಿಯು ಮತ್ತು ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಹೆದ್ದಾರಿ ತಡೆದು ಪ್ರತಿಭಟನೆ
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆಕೊಟ್ಟ ಅಖಿಲ ಭಾರತ ಮುಷ್ಕರದ ಹಿನ್ನೆಲೆಯಲ್ಲಿ ನಗರದಲ್ಲಿ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಮತ್ತು ವಿವಿಧ ಬ್ಯಾಂಕ್ ನೌಕರರು ಬಸ್ ನಿಲ್ದಾಣದ ಬಳಿ ಸೇರಿ ಮಾನವ ಸರಪಳಿ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು.
ಬಳಿಕ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು.