ಕರ್ನಾಟಕ

karnataka

ETV Bharat / state

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಶುಚಿತ್ವಕ್ಕೆ ಒತ್ತು ನೀಡಿ: ಡಾ.ಹರೀಶ್ ಕುಮಾರ್

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಶುಚಿತ್ವಕ್ಕೆ ಒತ್ತು ಕೊಟ್ಟು ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಸೂಚಿಸಿದ್ದಾರೆ.

By

Published : Mar 20, 2020, 10:03 AM IST

kn_kwr_03_sslc_sabhe_7202800
ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಶುಚಿತ್ವಕ್ಕೆ ಒತ್ತು ನೀಡಿ: ಡಾ.ಹರೀಶ್ ಕುಮಾರ್

ಕಾರವಾರ: ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಶುಚಿತ್ವಕ್ಕೆ ಒತ್ತು ಕೊಟ್ಟು ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2020ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ಹರಡುವಿಕೆ ತಡಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಕೂಡ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ನಡೆಸಬೇಕಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷೆಯ ಕೊಠಡಿಗಳು ಶುಚಿತ್ವ ಹೊಂದುವುದು ಅತ್ಯಗತ್ಯವಾಗಿದ್ದು ವಿದ್ಯಾರ್ಥಿಗಳಿಗೆ ಬಿಸಿನೀರು ಒದಗಿಸುವ ಕಾರ್ಯ ಕೂಡ ಮಾಡಬೇಕು. ಅಲ್ಲದೇ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಪಾಲಕರು ಗುಂಪು-ಗುಂಪಾಗಿ ಸೇರಲು ಅವಕಾಶ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ 73 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಿ, ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಭದ್ರತೆಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಯಾವುದೇ ಗೊಂದಲಗಳಿಗೆ ಆಸ್ಪದ ನೀಡಬಾರದು. ಪರೀಕ್ಷಾ ಕೇಂದ್ರಗಳಿಗೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಒಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಉಸ್ತುವಾರಿ ವಹಿಸಲು ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಿಸಬೇಕೆಂದು ತಿಳಿಸಿದರು.

ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 35 ಪರೀಕ್ಷಾ ಕೇಂದ್ರಗಳಿದ್ದು, 10325 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಇನ್ನು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 38 ಪರೀಕ್ಷಾ ಕೇಂದ್ರಗಳಿದ್ದು, 186 ಶಾಲೆಗಳ 9583 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details