ಕಾರವಾರ:ಜೂನ್ 7ಕ್ಕೆ ಲಾಕ್ಡೌನ್ ಅವಧಿ ಮುಗಿಯುವುದರಿಂದ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚೆ ನಡೆಸಿದ್ದು, ಲಾಕ್ಡೌನ್ ಮುಂದುವರಿಸಬೇಕೋ, ಬೇಡವೋ ಎಂಬುದನ್ನು ಇನ್ನೆರಡು ದಿನಗಳಲ್ಲಿ ಅಂತಿಮಗೊಳಿಸಲಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಇನ್ನೆರಡು ದಿನದಲ್ಲಿ ಲಾಕ್ಡೌನ್ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ: ಶಿವರಾಮ್ ಹೆಬ್ಬಾರ್
ರಾಜ್ಯದ ಕೊರೊನಾ ಪರಿಸ್ಥಿತಿಯ ಅವಲೋಕಿಸಿ, ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚೆ ನಡೆಸಿ ಲಾಕ್ಡೌನ್ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
Shivaram Hebbar
ಕಾರವಾರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಕರಾವಳಿ, ಮಲೆನಾಡು ಹೊಂದಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ರೈತರು, ಕೃಷಿಕರ ಬಗ್ಗೆ ಕಾಳಜಿ ವಹಿಸಿದ್ದೇವೆ. ಅವರಿಗೆ ತೊಂದರೆಯಾಗದ ರೀತಿಯಲ್ಲಿ ನಾವು ಕೂಡ ಕ್ರಮಗಳನ್ನು ಕೈಗೊಳ್ಳುತ್ತೇವೆ. ಮುಖ್ಯಮಂತ್ರಿಗಳ ತೀರ್ಮಾನದ ಬಳಿಕ ನಾವು ವಿನಾಯಿತಿ ನೀಡಲಿದ್ದೇವೆ ಎಂದು ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಇದನ್ನೂ ಓದಿ:ಅನ್ನದಾತರೇ ಎಚ್ಚರ..! ಚೀನಾ ಬೀಜ ಬಳಸಿದ್ರೆ, ನಿಮ್ಮ ಭೂಮಿಯೇ ಬಂಜರಾಗುತ್ತೆ ಹುಷಾರ್...