ಶಿರಸಿ: ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದ ಘಟನೆ ಶಿರಸಿ ತಾಲೂಕಿನ ರಾಮಾಪುರ ಗ್ರಾಮದಲ್ಲಿ ನಡೆದಿದೆ.
ಪ್ರಚಾರದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಜಟಾಪಟಿ.. - ಉಪಚುನಾವಣೆಯಲ್ಲಿ ಕಾರ್ಯಕರ್ತರ ಜಗಳ
ಶಿರಸಿ ತಾಲೂಕಿನ ರಾಮಾಪುರ ಗ್ರಾಮದಲ್ಲಿ ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದಾರೆ.
ಯಲ್ಲಾಪುರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಪ್ರಚಾರಕ್ಕೆ ಆಗಮಿಸಿದ ಮಾಜಿ ಸಚಿವ ಆರ್ ವಿ ದೇಶಪಾಂಡೆ ಕಾರಿನಲ್ಲಿ ವಾಪಸ್ ತೆರಳುವಾಗ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಂತೆ, ಸ್ಥಳಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಂದಿದ್ದಾರೆ. ತಮ್ಮ ನಾಯಕರ ಪರ ಘೋಷಣೆ ಕೂಗುವುದರ ಜತೆಗೆ ಒಬ್ಬರ ಮೇಲೊಬ್ಬರು ಆರೋಪಗಳಿಗೆ ಮುಂದಾಗಿದ್ದಾರೆ. ಪರಿಣಾಮ ಗದ್ದಲದ ವಾತಾವರಣ ನಿರ್ಮಾಣವಾಗಿದೆ. ಎರಡು ಪಕ್ಷದ ಕಾರ್ಯಕರ್ತರನ್ನ ಪೊಲೀಸರು ಚದುರಿಸಿದ ನಂತರ ಸಹಜ ಸ್ಥಿತಿ ನಿರ್ಮಾಣವಾಯಿತು.