ಭಟ್ಕಳ(ಉತ್ತರ ಕನ್ನಡ):ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಬೇರಪ್ಪ ಪರ ಪ್ರಚಾರ ಸಭೆ ನಡೆಯಿತು.
ಸಭೆ ಉದ್ಘಾಟಿಸಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಈ ಬಾರಿ ಚುನಾವಣೆಯಲ್ಲಿ ಪ್ರತೀ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದು, ಅವರ ಪರಿಶ್ರಮದಿಂದ ನಮ್ಮ ಅಭ್ಯರ್ಥಿ ಗೆಲ್ಲುವುದು ಖಚಿತ ಎಂದರು.
ನಂತರ ಮಾತನಾಡಿದ ಅಭ್ಯರ್ಥಿ ಕುಬೇರಪ್ಪ, ಈಗಾಗಲೇ ಹಾವೇರಿ, ಧಾರವಾಡ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಪದವೀಧರರ ನೋಂದಣಿ ಕಾರ್ಯ ನಡೆಸಲಾಗಿದ್ದು, ಒಟ್ಟು 64 ಸಾವಿರ ಪದವೀಧರ ಮತದಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ ಧಾರವಾಡ ಜಿಲ್ಲೆಯಿಂದ 17,355, ಗದಗ ಜಿಲ್ಲೆಯಿಂದ 14,345, ಹಾವೇರಿ ಜಿಲ್ಲೆಯಿಂದ 22,000 ಹಾಗೂ ಉತ್ತರ ಕನ್ನಡ ಜಿಲ್ಲೆಯಿಂದ 10,610 ಮಂದಿ ಹೆಸರು ನೋಂದಾಯಿಸಿದ್ದಾರೆ ಎಂದು ತಿಳಿಸಿದರು.
ಇಂದಿನಿಂದ ಅಧಿಕೃತವಾಗಿ ಚುನಾವಣಾ ಮತಯಾಚನೆಯನ್ನು ಜಿಲ್ಲೆಯಿಂದ ಆರಂಭಿಸಿದ್ದೇವೆ. ಗುರುವಾರದಿಂದ ಭಟ್ಕಳ ಶಾಲಾ,ಕಾಲೇಜಿನಲ್ಲಿ ಮತ ಪ್ರಚಾರ ನಡೆಸಲಿದ್ದೇವೆ ಎಂದು ತಿಳಿಸಿದರು.
ಇನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭಗವತಿ ಮಾತನಾಡಿ, ಪ್ರಾರಂಭಿಕ ಹಂತದ ಪ್ರಯತ್ನದ ಕೆಲಸದಿಂದ ಚುನಾವಣಾ ಪ್ರಚಾರ ಕಾರ್ಯ ನಡೆಸಿದ್ದು, ಜಿಲ್ಲೆಯ ಕಾರ್ಯಕರ್ತರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಗೆಲುವು ನಮ್ಮದೇ ಎಂಬ ವಿಶ್ವಾಸವಿದೆ ಎಂದು ಹೇಳಿದರು.