ಕರ್ನಾಟಕ

karnataka

ETV Bharat / state

ನಿರಂತರ ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ವಿರೋಧ: ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ

ಸರ್ಕಾರ ನಿರಂತರವಾಗಿ ತೈಲ ಬೆಲೆ ಏರಿಕೆ ಮಾಡುತ್ತಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.

Appeal
Appeal

By

Published : Jun 29, 2020, 6:13 PM IST

ಕಾರವಾರ:ಪೆಟ್ರೋಲ್ ಹಾಗೂ ಡೀಸೆಲ್​ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನರ ಸುಲಿಗೆ ಮಾಡುತ್ತಿದ್ದು, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.

ಕಳೆದ ಆರು ವರ್ಷದಿಂದ ತೈಲ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಮಾಡಲಾಗುತ್ತಿದೆ. ಆದರೆ ಪ್ರಸ್ತುತ ದೇಶವೇ ಕೋವಿಡ್​ ಸಮಸ್ಯೆಯ ಸುಳಿಯಲ್ಲಿ ಸಿಲುಕಿ ತೊಂದರೆ ಅನುಭವಿಸುತ್ತಿರುವಾಗ ತೈಲ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಆಘಾತ ನೀಡಿದೆ ಎಂದು ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಕೂಡಲೇ ಈ ಬಗ್ಗೆ ರಾಷ್ಟ್ರಪತಿಗಳು ಸರ್ಕಾರಕ್ಕೆ ಬೆಲೆ ಏರಿಕೆ ತಡೆಯಲು ಸೂಚಿಸಬೇಕು ಹಾಗೂ ಜನಸಾಮಾನ್ಯರ ಮೇಲಾಗುತ್ತಿರುವ ಹೊರೆಯನ್ನು ತಪ್ಪಿಸುವಂತೆ ಮನವಿ ಮಾಡಿದ್ದಾರೆ.

ABOUT THE AUTHOR

...view details