ಭಟ್ಕಳ: ಬಿಜೆಪಿ ಸರ್ಕಾರ ವಿವಿಧ ಹಗರಣಗಳಲ್ಲಿ ಮುಳುಗಿದ್ದು, ಪ್ರಜೆಗಳಿಗೆ ಮಾರಕವಾಗಿರುವ ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ ಭಟ್ಕಳ ಬ್ಲಾಕ್‍ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ರೈತ ವಿರೋಧಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿ ಮಾಡಲಾಗುತ್ತಿದೆ. ಕೂಡಲೇ ಜನವಿರೋಧಿ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.