ಶಿರಸಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಶಿರಸಿಯಲ್ಲಿ ಪ್ರತಿಭಟನೆ ನಡೆಸಿದರು.
ಶಿರಸಿ: ಇಂಧನ ಬೆಲೆ ಏರಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ - ಕಾಂಗ್ರೆಸ್ ಪ್ರತಿಭಟನೆ
ಭಾರತದಲ್ಲಿ ತೈಲ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಶಿರಸಿಯಲ್ಲಿ ಪ್ರತಿಭಟನೆ ಮಾಡಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೂಡಲೇ ತೈಲ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ತಹಶೀಲ್ದಾರರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ್ ಮಾತನಾಡಿ, ಜಾಗತಿಕವಾಗಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಮಾತ್ರ ಏರುತ್ತಲೇ ಇದೆ. ದೇಶದ ಸ್ಥಿತಿ ಚಿಂತಾಜನಕವಾಗಿದ್ದರೂ ತೈಲೆ ಬೆಲೆ ಏರಿಕೆ ಅಗತ್ಯವೇ ಎಂದು ಪ್ರಶ್ನಿಸಿದರು.