ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಮಳೆ ಮುಂದುವರೆದಿದ್ದು, ಹಲವು ಕಡೆ ಬಿಟ್ಟು ಬಿಟ್ಟು ಮಳೆಯಾಗಿದೆ. ಜಿಲ್ಲಾ ಕೇಂದ್ರ ಕಾರವಾರದಲ್ಲಿ ಇಂದು ಬೆಳಗ್ಗೆಯಿಂದಲೇ ಧಾರಾಕಾರ ಮಳೆಯಾಗಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ಥವಾಗಿದ್ದು, ವಿದ್ಯುತ್ ಕಡಿತಗೊಂಡಿದೆ.
ಕರಾವಳಿಯಲ್ಲಿ ಮುಂದುವರಿದ ಮಳೆ: ಸಮುದ್ರದಲ್ಲಿ ಅಲೆಗಳ ಅಬ್ಬರ - kannadanews
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಮಳೆ ಮುಂದುವರೆದಿದ್ದು, ಸಮುದ್ರದಲ್ಲಿ ಅಲೆಗಳು ರೌದ್ರ ನರ್ತನ ತೋರಿವೆ.
ಕರಾವಳಿಯಲ್ಲಿ ಮುಂದುವರಿದ ಮಳೆ
ಇನ್ನು ಜಿಲ್ಲೆಯ ಕರಾವಳಿ ತಾಲೂಕುಗಳಾದ ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲೂ ಮಳೆ ಮುಂದುವರೆದಿದ್ದು ಮಳೆ ಗಾಳಿಗೆ ಆಳ ಸಮುದ್ರದಲ್ಲಿ ಅಲೆಗಳ ಅಬ್ಬರ ಸಹ ಹೆಚ್ಚಾಗಿದೆ. ಆಳೆತ್ತರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ಮೀನುಗಾರಿಕೆ ಸಂಪೂರ್ಣ ಬಂದ್ ಆಗಿದೆ