ಕಾರವಾರ:ಶಾಲೆಯಲ್ಲಿದ್ದ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕುಮಟಾ ತಾಲೂಕಿನ ವಾಲ್ಗಳ್ಳಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದಿದೆ.
ಶಾಲೆಯಲ್ಲಿ ಅಡುಗೆ ಅನಿಲ ಸೋರಿಕೆ: ತಪ್ಪಿದ ಭಾರಿ ಅನಾಹುತ - ಕುಮಟಾ
ಶಾಲೆಯಲ್ಲಿದ್ದ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಾರವಾರದ ಕುಮಟಾ ತಾಲೂಕಿನ ವಾಲ್ಗಳ್ಳಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದಿದೆ.
ಅಡುಗೆ ಅನಿಲ ಸೋರಿಕೆ
ಶಾಲೆಯ ಅಡುಗೆ ಕೋಣೆಯಲ್ಲಿ ಇಟ್ಟಿದ್ದ ಸಿಲಿಂಡರ್ ಸೋರಿಕೆಯಾಗಿ ಕಟ್ಟಡ ಹಾಗೂ ಅಡುಗೆ ಸಾಮಾನುಗಳಿಗೆ ಬೆಂಕಿ ತಗುಲಿತ್ತು. ಶಾಲೆಯಿಂದ ಹೊಗೆ ಬರುವುದನ್ನು ಗಮನಿಸಿದ ಶಿಕ್ಷಕರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ತಿಳಿಸಿದ್ದರು. ಅದರಂತೆ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಯಾವುದೇ ಹೆಚ್ಚಿನ ಹಾನಿ, ಪ್ರಾಣಾಪಾಯ ಸಂಭವಿಸಿಲ್ಲ. ಅಡುಗೆ ಸಾಮಾನುಗಳು ಬೆಂಕಿಗೆ ಸುಟ್ಟು ಹಾನಿಯಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಹಾಗೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.