ಕಾರವಾರ:ಕುಮಟಾ-ಹೊನ್ನಾವರ ಶಾಸಕ ದಿನಕರ ಶೆಟ್ಟಿ ಅವರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.
ಕಾರವಾರ : ಶಾಸಕ ದಿನಕರ ಶೆಟ್ಟಿಗೆ ಕೊರೊನಾ ದೃಢ - ಕಾರವಾರ ಕೊರೊನಾ ಲೆಟೆಸ್ಟ್ ನ್ಯೂಸ್
ಕುಮಟಾ - ಹೊನ್ನಾವರ ಶಾಸಕ ದಿನಕರ ಶೆಟ್ಟಿ ಅವರಿಗೆ ಕೊರೊನಾ ಸೋಂಕು ತಗುಲಿದೆ.
Corona
ಶಾಸಕರಿಗೆ ರೋಗದ ಯಾವುದೇ ಲಕ್ಣಣಗಳು ಇರಲಿಲ್ಲ. ತಾಲೂಕು ಆಸ್ಪತ್ರೆಯಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದ ವೇಳೆ ಸೋಂಕು ದೃಢಪಟ್ಟಿದೆ. ಅವರ ಕುಟುಂಬದ ಆಪ್ತರೊಬ್ಬರಿಗೆ ಇತ್ತೀಚೆಗೆ ಸೋಂಕು ತಗುಲಿತ್ತು. ಅವರಿಂದ ಸೋಂಕು ತಗುಲಿದೆ ಎನ್ನಲಾಗಿದೆ.
ಸದ್ಯ ಶಾಸಕ ದಿನಕರ ಶೆಟ್ಟಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಮನೆಗೆ ಮರಳಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅವರ ಪತ್ನಿ, ಮಕ್ಕಳ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.