ಕರ್ನಾಟಕ

karnataka

ETV Bharat / state

ಉತ್ತರ ಕನ್ನಡದಲ್ಲಿ ನಾಳೆ ಕೊರೊನಾ ಲಸಿಕೆ 'ಡ್ರೈ ರನ್' - ಡ್ರೈ ರನ್​

ಕಾರವಾರದ ಜಿಲ್ಲಾ ಆಸ್ಪತ್ರೆ, ಬೈತಖೋಲ್ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿರಸಿ ಟಿಎಸ್ಎಸ್ ಆಸ್ಪತ್ರೆ, ಹೆಗಡೆಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರ, ಹೊನ್ನಾವರ ತಾಲೂಕು ಆಸ್ಪತ್ರೆ, ದಾಂಡೇಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ನಾಳೆ ಕೊರೊನಾ ಲಸಿಕೆ 'ಡ್ರೈ ರನ್' ನಡೆಸಲಾಗುತ್ತದೆ.

Uttara Kannada
ಕಾರವಾರ

By

Published : Jan 7, 2021, 8:17 PM IST

ಕಾರವಾರ:ಉತ್ತರಕನ್ನಡ ಜಿಲ್ಲೆಯಲ್ಲಿ ಮೊದಲನೇ ಹಂತದ ಕೊರೊನಾ ಲಸಿಕೆ ನೀಡುವ ಕುರಿತಾಗಿ ನಾಳೆ (ಜ.8) ತಾಲೀಮು (ಡ್ರೈ ರನ್) ನಡೆಯಲಿದ್ದು, ಜಿಲ್ಲೆಯ ಆರು ಸ್ಥಳಗಳಲ್ಲಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಡ್ರೈ ರನ್ ನಡೆಸಲಾಗಿದ್ದು, ಸರ್ಕಾರದ ಆದೇಶದಂತೆ ಉತ್ತರಕನ್ನಡ ಜಿಲ್ಲೆಯಲ್ಲಿಯೂ ನಾಳೆ ಕೊರೊನಾ ಲಸಿಕೆ 'ಡ್ರೈ ರನ್' ನಡೆಯಲಿದೆ. ಕಾರವಾರದ ಜಿಲ್ಲಾ ಆಸ್ಪತ್ರೆ, ಬೈತಖೋಲ್ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿರಸಿ ಟಿಎಸ್ಎಸ್ ಆಸ್ಪತ್ರೆ, ಹೆಗಡೆಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರ, ಹೊನ್ನಾವರ ತಾಲೂಕು ಆಸ್ಪತ್ರೆ, ದಾಂಡೇಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ.

ಇದನ್ನೂ ಓದಿ:ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ 6 ಹಕ್ಕಿಗಳ ಸಾವು: ಹಕ್ಕಿಜ್ವರದ ಶಂಕೆ

ಡ್ರೈ ರನ್​ ವೇಳೆ ಸಾಧಕ- ಬಾಧಕಗಳ ಕುರಿತು ಪರಿಶೀಲಿಸಿ, ಸ್ಪಷ್ಟ ಅಭಿಪ್ರಾಯ ಹಾಗೂ ಸಲಹೆಗಳನ್ನು ಅಧಿಕಾರಿಗಳು ಜಿಲ್ಲಾಡಳಿತಕ್ಕೆ ನೀಡಬೇಕಿದೆ. ಈ ವೇಳೆ ಯಾವುದಾದರೂ ನ್ಯೂನತೆ ಕಂಡುಬಂದಲ್ಲಿ ಅವುಗಳನ್ನು ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಸರಿಪಡಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿ ಸಲ್ಲಿಸಲು ಈಗಾಗಲೇ ಜಿಲ್ಲಾಧಿಕಾರಿ ಡಾ.ಕೆ ಹರೀಶ್​ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ABOUT THE AUTHOR

...view details