ಭಟ್ಕಳ: ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ತಾಯಿ- ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮಗುವಿಗೆ ಜನ್ಮ ನೀಡಿದ ಕೋವಿಡ್ ಸೋಂಕಿತ ಮಹಿಳೆ... ತಾಯಿ-ಮಗು ಸುರಕ್ಷಿತ - ಭಟ್ಕಳ ಕೋವಿಡ್ ಸೋಂಕಿತ ಗರ್ಭಿಣಿ ನ್ಯೂಸ್
ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಭಟ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
Bhatkal
ತಾಲೂಕಿನ ಸ್ಥಳೀಯ ನಿವಾಸಿಯಾಗಿರುವ ಗರ್ಭಿಣಿವೋರ್ವಳು ಕೋವಿಡ್ ಸೋಂಕಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಶನಿವಾರ ರಾತ್ರಿ ಡಾ. ಶಮ್ಸ್ ನೂರ್ ಅವರು ಶಸ್ತ್ರಚಿಕಿತ್ಸೆ ನಡೆಸಿದ್ದು, ಹೆಣ್ಣು ಮಗುವಿಗೆ ಕೊರೊನಾ ಸೋಂಕಿತ ಮಹಿಳೆ ಜನ್ಮ ನೀಡಿದ್ದಾರೆ.
ಶಸ್ತ್ರಚಿಕಿತ್ಸೆ ವೇಳೆ ಡಾ. ಸವಿತಾ ಕಾಮತ್, ಸ್ಟಾಫ್ ನರ್ಸ್ ಆದ ರೇಖಾ ಶೆಟ್ಟಿ, ಭಾರತಿ ಇನ್ನಿತರರು ಉಪಸ್ಥಿತರಿದ್ದರು.