ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಶೇಷ ಚೇತನರಿಗೆ ಆಯೋಜಿಸಲಾಗಿದ್ದ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿಯಾಗಿದ್ದು, ಒಟ್ಟು 4,871 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.
ವಿಕಲಚೇತನರಿಗೆ ಲಸಿಕೆ ಹಾಕಿಕೊಳ್ಳಲು ತೊಂದರೆ ಉಂಟಾಗದಂತೆ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಎರಡು ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ನಡೆದಾಡಲು ಸಾಧ್ಯವೇ ಇಲ್ಲದವರಿಗೆ ಮನೆ ಬಾಗಿಲಿಗೆ ವಾಹನ ಕಳುಹಿಸಿ ಲಸಿಕಾ ಕೇಂದ್ರಕ್ಕೆ ಕರೆತಂದು ಲಸಿಕೆ ನೀಡಲಾಗಿದೆ. ಲಸಿಕಾ ಕೇಂದ್ರದಲ್ಲಿಯೂ ಅಂಗವಿಕಲರಿಗೆ ಕುಳಿತುಕೊಳ್ಳಲು ಆಸನ, ಕುಡಿಯುವ ನೀರು ಸೇರಿದಂತೆ ಇನ್ನಿತರ ವ್ಯವಸ್ಥೆ ಕಲ್ಪಿಸಿ ಜಿಲ್ಲಾಡಳಿತ ಲಸಿಕಾ ಅಭಿಯಾನ ಯಶಸ್ವಿಗೊಳಿಸಿದೆ.