ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಅಭಾವ ಹೆಚ್ಚುತ್ತಿದ್ದು ಕಾರವಾರ ಸೇರಿದಂತೆ ಜಿಲ್ಲೆಯಾದ್ಯಂತ ಲಸಿಕೆ ಪಡೆಯುವುದಕ್ಕಾಗಿ ಗಾಳಿ-ಮಳೆಯನ್ನು ಲೆಕ್ಕಿಸದೆ ಮುಂಜಾನೆಯಿಂದಲೇ ಜನರು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕೋವಿಡ್ ಲಸಿಕೆಗಾಗಿ ಪರದಾಟ: ದಿನವಿಡೀ ಸಾಲುಗಟ್ಟಿ ನಿಲ್ಲುತ್ತಿರುವ ಉತ್ತರ ಕನ್ನಡ ಜನ - Covid vaccine shortage in karwar
ಕೋವಿಡ್ ಲಸಿಕೆಗೆ ಎಲ್ಲಿಲ್ಲದ ಡಿಮ್ಯಾಂಡ್ ಬಂದಿದೆ. ದಿನೇ ದಿನೇ ಸೋಂಕು ಹರಡುವಿಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಜನರು ಭೀತಿಯಲ್ಲಿದ್ದಾರೆ. ಹೀಗಾಗಿ ನಾ ಮುಂದು ತಾ ಮುಂದು ಎಂಬಂತೆ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯಲ್ಲಿ ಲಸಿಕೆ ಅಭಾವ ಕಂಡುಬಂದಿದೆ.
![ಕೋವಿಡ್ ಲಸಿಕೆಗಾಗಿ ಪರದಾಟ: ದಿನವಿಡೀ ಸಾಲುಗಟ್ಟಿ ನಿಲ್ಲುತ್ತಿರುವ ಉತ್ತರ ಕನ್ನಡ ಜನ Covid vaccine shortage in karwar](https://etvbharatimages.akamaized.net/etvbharat/prod-images/768-512-12667835-thumbnail-3x2-lek.jpg)
ಜಿಲ್ಲಾ ಕೇಂದ್ರ ಕಾರವಾರದಲ್ಲಿ ದಿನವಿಡೀ ಲಸಿಕೆಗಾಗಿ ಜನರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನಿಭವಿಸುತ್ತಿದ್ದಾರೆ. ಮೊದಲ ಡೋಸ್ ಪಡೆದು ಎರಡನೇ ಡೋಸ್ ಪಡೆಯಲು ಬಂದವರು ಲಸಿಕೆ ಸಿಗದೆ ವಾಪಸ್ ಹೋಗಬೇಕಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಹ ಲಸಿಕೆ ವಿತರಣೆಗಾಗಿ ಗಲಾಟೆ ನಡೆಯುತ್ತಿದೆ. ಜನರು ವ್ಯಾಕ್ಸಿನ್ ಪಡೆಯಲು ಮನಸ್ಸು ಮಾಡುತ್ತಿದ್ದಾರೆ. ಆದರೆ ಸೀಮಿತ ಪ್ರಮಾಣದ ಲಸಿಕೆ ಪೂರೈಕೆಯಾಗುತ್ತಿದೆ. ಕೂಡಲೇ ಆಗತ್ಯ ಲಸಿಕೆ ಪೂರೈಕೆ ಮಾಡಿ, ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.