ಕಾರವಾರ :ವಾಹನದಲ್ಲಿ ಬಂದ ನಾಲ್ವರು ಅಪರಿಚಿತರು ಆಕಳೊಂದನ್ನು ಕದ್ದು ಪರಾರಿಯಾಗಿರುವ ಘಟನೆ ಹೊನ್ನಾವರ ತಾಲೂಕಿನ ಗುಣವಂತೆಯಲ್ಲಿ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಾರಿನಲ್ಲಿ ಬಂದು ಹಸು ಕಳ್ಳತನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಕಾರವಾರ ಕಾರಿನ ಡಿಕ್ಕಿಯಲ್ಲಿ ಹಾಕಿ ಹಸು ಕಳ್ಳತನ
ಈ ದೃಶ್ಯ ಸಮೀಪದ ಹೋಟೆಲೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಪೋಸ್ಟ್ ಮಾಸ್ಟರ್ ಮಂಜುನಾಥ ಯಾಜಿ ಎನ್ನುವರು ಮಂಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಗೋ ಕಳ್ಳರಿಗಾಗಿ ಬಲೆ ಬೀಸಿದ್ದಾರೆ..

ಹಸು ಕಳ್ಳತನ
ಕಾರಿನಲ್ಲಿ ಬಂದು ಹಸು ಕಳ್ಳತನ
ಭಾನುವಾರ ನಸುಕಿನ ಜಾವ ಕಾರಿನಲ್ಲಿ ಬಂದ ನಾಲ್ವರು ಅಪರಿಚಿತರು, ಗುಣವಂತೆ ಗ್ರಾಮದ ಮರಿ ಭಟ್ಟರ ಹೋಟೆಲ್ ಮುಂದೆ ನಿಂತಿದ್ದ ಆಕಳನ್ನು ವಾಹನದ ಡಿಕ್ಕಿಯಲ್ಲಿ ಹಾಕಿಕೊಂಡು ಪರಾರಿಯಾಗಿದ್ದಾರೆ.
ಈ ದೃಶ್ಯ ಸಮೀಪದ ಹೋಟೆಲೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಪೋಸ್ಟ್ ಮಾಸ್ಟರ್ ಮಂಜುನಾಥ ಯಾಜಿ ಎನ್ನುವರು ಮಂಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಗೋ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.