ಶಿರಸಿ (ಉತ್ತರ ಕನ್ನಡ) :ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿದ ಆರೋಪಿಯನ್ನು ಶಿರಸಿಯ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಆಂದ್ರಪ್ರದೇಶದ ರಾಯಚೂಟಿ ತಾಲೂಕಿನ ಶಿವ ರಾಮಯ್ಯ (26) ಬಂಧಿತ ಆರೋಪಿ. ಈತ ಕಳೆದ ಒಂದು ತಿಂಗಳಿನಿಂದ ಶಿರಸಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದನು.
ಈತ ಕೆಲಸ ಮಾಡುತ್ತಿದ್ದ ಸ್ಥಳದ ಸಮೀಪದಲ್ಲಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ವೈರ್ನಿಂದ ಕೊಲೆ ಮಾಡಲು ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಮಗು ಜೋರಾಗಿ ಅತ್ತು ಗೋಗರೆದ ಶಬ್ದ ಕೇಳಿ ಅಕ್ಕಪಕ್ಕದ ಜನರು ಓಡಿ ಬಂದಿದ್ದರು. ಆರೋಪಿ ಪರಾರಿಯಾಗಿದ್ದ. ಹೀಗೆ ತಪ್ಪಿಸಿಕೊಂಡು ಪರಾರಿ ಯಾಗುತ್ತಿದ್ದವನನ್ನು ಸಾರ್ವಜನಿಕರ ಸಹಕಾರದಲ್ಲಿ ಮಾರುಕಟ್ಟೆ ಠಾಣೆಯ ಪಿಎಸ್ಐ ಭೀಮಾಶಂಕರ್ ಹಾಗೂ ಸಿಬ್ಬಂದಿ ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾಧಿಕಾರಿ ಸಿಪಿಐ ರಾಮಚಂದ್ರ ನಾಯಕ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಚಾಕೊಲೇಟ್ ಕೊಡುವುದಾಗಿ ಹೇಳಿ ಅತ್ಯಾಚಾರ : ಇದೇ ತಿಂಗಳ ಜೂನ್ 19 ರಂದು ರಾಯಚೂರು ಜಿಲ್ಲೆಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಅತ್ಯಾಚಾರ ನಡೆಸಲಾಗಿತ್ತು. ಸಪನ್ ಮಂಡಲ್ ಎಂಬಾತ ಬಂಧಿತ ಆರೋಪಿ. ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ತನ್ನ ಸ್ಕೂಟಿಯಲ್ಲಿ ಕರೆದುಕೊಂಡು ಹೋದ ಆರೋಪಿ.