ಕಾರವಾರ:ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯನ್ನು ಮೊಸಳೆಗಳು ಎಳೆದೊಯ್ದ ಘಟನೆ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯ ನಿರಂತರ ಹುಡುಕಾಟ ನಡೆಸಿದ ಬಳಿಕ ಶವ ಪತ್ತೆಯಾಗಿದೆ.
ಗುಜರಾತ್ ಮೂಲದ ದಾಂಡೇಲಿ ನಿವಾಸಿ ಪೀತಾಂಬರದಾಸ್ ಮೃತಪಟ್ಟ ವ್ಯಕ್ತಿ. ಕಾಳಿ ನದಿಯಲ್ಲಿ ಈಜಲು ತೆರಳಿದ್ದಾಗ ದಂಡೆಯ ಮೇಲೆ ಚಪ್ಪಲಿ, ಬಟ್ಟೆ ಇಟ್ಟು ನದಿಗೆ ಇಳಿದಿದ್ದಾರೆ. ಈ ವೇಳೆ, ಎರಡು ಮೊಸಳೆಗಳು ಈತನ ಮೇಲೆ ದಾಳಿ ನಡೆಸಿ ಹೊತ್ತೊಯ್ದಿವೆ. ಇದನ್ನು ಸ್ಥಳೀಯ ಜನರು ನೋಡಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.