ಕರ್ನಾಟಕ

karnataka

ETV Bharat / state

ಸೋನಾರಕೇರಿಯ ವಿದ್ಯಾರ್ಥಿಗಳಿಗೆ ಸೈಕಲ್​ ವಿತರಣೆ.. - Students

ಪೋಷಕರು ಸಂಸ್ಕೃತಿ ಹಾಗೂ ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸುನೀಲ್​ ನಾಯ್ಕ ಹೇಳಿದರು.

ಸೋನಾರಕೇರಿಯ ವಿದ್ಯಾರ್ಥಿಗಳಿಗೆ ಸೈಕಲ್​ ವಿತರಣೆ

By

Published : Sep 20, 2019, 7:45 AM IST

ಭಟ್ಕಳ: ಸೋನಾರಕೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸುನೀಲ್​ ನಾಯ್ಕ, ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಂಸ್ಕೃತಿ ಹಾಗೂ ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಸೈಕಲ್​ ವಿತರಣೆ

ಸೈಕಲ್​ ವಿತರಣೆಗೂ ಮೊದಲು ಪ್ರೌಢಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ಮರುನಿರ್ಮಾಣಕ್ಕೆ 15 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ABOUT THE AUTHOR

...view details