ಕಾರವಾರ:ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, ಕೆಲವೊಂದು ಸಡಲಿಕೆ ಮಾಡಲಾಗಿದೆ. ಈ ಕುರಿತೆಂತೆ ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡದಲ್ಲಿ ಲಾಕ್ಡೌನ್ ಸಡಿಲಿಕೆ: 6 ಗಂಟೆಗೆ ವ್ಯಾಪಾರ-ವಹಿವಾಟು ಬಂದ್ ಮಾಡಲು ಡಿಸಿ ಸೂಚನೆ
ರಾಜ್ಯದಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, ಕೆಲವೊಂದು ಸಡಿಲಿಕೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಚಿಸಿದ ಎಲ್ಲಾ ನಿಯಮಗಳು ಜಿಲ್ಲೆಗೆ ಅನ್ವಯವಾಗಲಿದ್ದು, ಯಾರೂ ಕೂಡ ಮಾಸ್ಕ್ ಇಲ್ಲದೆ ಓಡಾಡುವಂತಿಲ್ಲ. ಜಿಲ್ಲೆಯಲ್ಲಿ ರಾತ್ರಿ ಲಾಕ್ಡೌನ್ ಕರ್ಫ್ಯೂ ಮುಂದುವರೆಯಲಿದ್ದು, ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯೊಳಗೆ ವ್ಯಾಪಾರ-ವಹಿವಾಟು ಮುಗಿಸಿ, ಯಾರೂ ರಸ್ತೆಯಲ್ಲಿ ಓಡಾಡಬಾರದು. ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶವಿದೆ.
ಪ್ರತಿಯೊಬ್ಬರಿಗೂ ಮಾಸ್ಕ್ ಕಡ್ಡಾಯವಾಗಿದ್ದು, ಹೊರ ರಾಜ್ಯದಿಂದ ಬಂದವರು ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂದು. ಜಿಲ್ಲೆಯಲ್ಲಿ ಕೊರೊನಾ ದೃಢಪಟ್ಟ ನಾಲ್ವರು ಹೊರ ರಾಜ್ಯದಿಂದ ಬಂದವರಾಗಿದ್ದು, ಹೊನ್ನಾವರ ಮತ್ತು ಯಲ್ಲಾಪುರಕ್ಕೆ ಬಂದ ಇಬ್ಬರನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ತಮಿಳುನಾಡಿನಿಂದ ಜೋಯಿಡಾಗೆ ಬಂದ ಮಹಿಳೆ ಹಾಗೂ ಗುಜರಾತ್ನಿಂದ ದಾಂಡೇಲಿಗೆ ಆಗಮಿಸಿದ ಯುವಕರಿಬ್ಬರು ಮನೆಗೆ ತೆರಳಿದ್ದು, ಆ ಎರಡು ಪ್ರದೇಶವನ್ನು ಕಂಟೇನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.