ಕರ್ನಾಟಕ

karnataka

ETV Bharat / state

ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ಬಾರದ ಪಶುವೈದ್ಯೆ: ತನಿಖೆಗೆ ಡಿಸಿ ಸೂಚನೆ - DC notices for investigation against veterinarian

ಜೊಯಿಡಾ ತಾಲೂಕಿನ ನಂದಿಗದ್ದಾದಲ್ಲಿ ಗ್ರಾಮ ವಾಸ್ತವ್ಯ ಹೂಡಿದ್ದ ಜಿಲ್ಲಾಧಿಕಾರಿಗೆ, ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಅರ್ಚನಾ ಸಿನ್ಹಾ ವಿರುದ್ಧ ಗ್ರಾಮಸ್ಥರು ದೂರು ಸಲ್ಲಿಸಿದರು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿ ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.

District Collector Mullai Mugilan
District Collector Mullai Mugilan

By

Published : Mar 21, 2021, 9:10 AM IST

ಕಾರವಾರ: ಬಸ್ ಸೌಕರ್ಯ ಇಲ್ಲ ಎಂಬ ಕಾರಣಕ್ಕೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬಾರದೆ ನಿರ್ಲಕ್ಷ್ಯವಹಿಸುತ್ತಿದ್ದ ಪಶು ವೈದ್ಯಾಧಿಕಾರಿ ವಿರುದ್ಧ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗ್ರಾಮ ವಾಸ್ತವ್ಯ

ಜೊಯಿಡಾ ತಾಲೂಕಿನ ನಂದಿಗದ್ದಾದಲ್ಲಿ ಗ್ರಾಮ ವಾಸ್ತವ್ಯ ಹೂಡಿದ್ದ ಜಿಲ್ಲಾಧಿಕಾರಿಗೆ, ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಅರ್ಚನಾ ಸಿನ್ಹಾ ವಿರುದ್ಧ ಗ್ರಾಮಸ್ಥರು ದೂರು ಸಲ್ಲಿಸಿದರು.

ಕಳೆದ ಆರು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಒಂದು ದಿನವೂ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬಂದಿಲ್ಲ.‌ ಕೇಳಿದ್ರೆ ಕಾಡಿನಲ್ಲಿರುವ ಗ್ರಾಮ, ಒಬ್ಬರೆ ಬರಲು ಸಾಧ್ಯವಿಲ್ಲ ಎನ್ನುತ್ತಾರೆ.‌ ಅಲ್ಲದೆ, ಗ್ರಾಮಕ್ಕೆ ಸರಿಯಾದ ಬಸ್ ಸೌಕರ್ಯ ಇಲ್ಲ. ಮಧ್ಯಾಹ್ನಕ್ಕೆ ಒಂದು ಬಸ್ ಬರಲಿದ್ದು, ಒಂದು ಗಂಟೆ ಬಳಿಕ ಅದೇ ಬಸ್​ಗೆ ವಾಪಸ್ ತೆರಳುತ್ತಾರೆ. ಇದರಿಂದಾಗಿ ರೈತರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಇವರಿಂದ ಸೇವೆ ನೀಡಲು ಸಾಧ್ಯವಾಗದಿದ್ದರೆ ವರ್ಗಾಯಿಸಿ ಬೇರೆಯವರನ್ನು ನಿಯುಕ್ತಿಗೊಳಿಸುವಂತೆ ಒತ್ತಾಯಿಸಿದರು.

ಈ ಹಿನ್ನೆಲೆ ವೈದ್ಯೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.

ABOUT THE AUTHOR

...view details