ಕಾರವಾರ: ಮೀನು ಹಿಡಿಯಲು ತೆರಳಿದಾಗ ಮೊಸಳೆ ಪಾಲಾಗಿದ್ದ ಬಾಲಕನ ಶವ ಎರಡು ದಿನಗಳ ಬಳಿಕ ಇಂದು ಪತ್ತೆಯಾಗಿದೆ.
ಮೊಹಿನ್ ಮೆಹಬೂಬ್ ಅಲಿ(15) ಮೃತ ಬಾಲಕ. ವಿನಾಯಕನಗರದ ಬಳಿಯ ಕಾಳಿ ನದಿ ದಂಡೆಯಲ್ಲಿ ಮೀನು ಹಿಡಿಯುತ್ತಿರುವಾಗ ದಾಳಿ ಮಾಡಿದ ಮೊಸಳೆ ಬಾಲಕನನ್ನು ಎಳೆದೊಯ್ದಿದಿತ್ತು. ಒಂದೆರಡು ಬಾರಿ ನದಿಯಲ್ಲಿ ಮೊಸಳೆಯು ಬಾಲಕನನ್ನು ಮೇಲಕ್ಕೆ ಎತ್ತಿ ಮುಳುಗಿಸಿದ್ದ ಬಳಿಕ ಬಾಲಕನ ಸುಳಿವು ಪತ್ತೆಯಾಗಿರಲಿಲ್ಲ. ಬಾಲಕನಿಗಾಗಿ ಸ್ಥಳೀಯರು ತೆಪ್ಪದ ಮೂಲಕ ಮತ್ತು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೋಟ್ಗಳ ಮೂಲಕ ಹುಡುಕಾಟ ನಡೆಸಿದ್ದರೂ ಬಾಲಕ ಪತ್ತೆಯಾಗಿರಲಿಲ್ಲ.