ಕಾರವಾರ (ಉತ್ತರ ಕನ್ನಡ):ಸೀಬರ್ಡ್ ನೌಕಾನೆಲೆಯ ಎರಡನೇ ಹಂತದ ಕಾಮಗಾರಿ ಪ್ರಗತಿ ಪರಿಶೀಲನೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು ಕಾರವಾರದ ಕದಂಬ ನೌಕಾನೆಲೆಗೆ ಭೇಟಿ ನೀಡಿದ್ದಾರೆ.
ಗೋವಾದಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು ನೌಕಾನೆಲೆ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಜೊತೆ ಸೇರಿ ಐಎನ್ಎಸ್ ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ ಸೀಬರ್ಡ್ ಎರಡನೇ ಹಂತದ ಯೋಜನೆ ಪ್ರಗತಿಯ ವೈಮಾನಿಕ ಸಮೀಕ್ಷೆ ನಡೆಸಿದರು.