ಕಾರವಾರ :ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮಂಜೂರಾಗಿರುವ 400 ಮನೆಗಳ ಹಣವನ್ನು ಫಲಾನುಭವಿಗಳಿಗೆ ವಿತರಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅಸ್ವಸ್ತಗೊಂಡಿದ್ದಾರೆ.
ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಮಂಜೂರಾದ 400 ಮನೆಗಳ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ)ದ ಜಿಲ್ಲಾಧ್ಯಕ್ಷ ರಾಜೇಶ್ ನಾಯ್ಕ ಹಾಗೂ ಬೆಂಬಲಿಗರು ಕಳೆದ ಏಳು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ.
ಆದರೆ, ಇಂದು ಏಕಾಏಕಿ ಧರಣಿ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದು, ತಕ್ಷಣ ಆ್ಯಂಬುಲೆನ್ಸ್ಗೆ ಕರೆ ಮಾಡಲಾಗಿತ್ತು. ಸ್ಥಳದಲ್ಲಿಯೇ ಆರೋಗ್ಯ ತಪಾಸಣೆ ನಡೆಸಿದ ಸಿಬ್ಬಂದಿ ಬಿಪಿ ಹೆಚ್ಚಾದ ಕಾರಣ ಹೀಗಾಗಿದ್ದು, ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.