ಕಾರವಾರ: ಗಾಂಜಾ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು 1 ಕೆ.ಜಿ ಗಾಂಜಾ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಕಾರವಾರ ತಾಲೂಕಿನ ಶಿರವಾಡದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಕಾರವಾರದಲ್ಲಿ ಗಾಂಜಾ ಸಾಗಣೆ ಯತ್ನ: ಮೂವರು ಆರೋಪಿಗಳು ಅಂದರ್
ಗಾಂಜಾ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು 1 ಕೆ.ಜಿ ಗಾಂಜಾ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಗೋವಾದ ಕಣಕೋಣ ಮೂಲದ ಗಂಗೇಶ ಪಾಥರಪೆಕರ, ಗೋಹಿಲ್ ಗಣೇಶ ಬೈರೆ ಹಾಗೂ ಶಿರವಾಡ ಮೂಲದ ಕಿಶನ್ ಬಾಂದೇಕರ್ ಬಂಧಿತ ಆರೋಪಿಗಳು. ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿರುವ ಬಗ್ಗೆ ಜಿಲ್ಲಾ ಅಪರಾಧ ಪತ್ತೆದಳದ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿತ್ತು. ಅದರಂತೆ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ನೇತೃತ್ವದಲ್ಲಿ ದಾಳಿ ನಡೆಸಿದ ಸಿಬ್ಬಂದಿ 1 ಕೆ.ಜಿ 40 ಗ್ರಾಂ ತೂಕದ ಗಾಂಜಾ ಸಹಿತ ಒಂದು ಕಾರು, ಬೈಕ್ ಮೂರು ಮೊಬೈಲ್ ಸಹಿತ 4.54 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಉಮೇಶ ನಾಯ್ಕ, ನಾಗರಾಜ ನಾಯ್ಕ, ಸುದರ್ಶನ ನಾಯ್ಕ, ಮಂಜುನಾಥ ಹೆಗಡೆ, ಹನುಮಂತ ಕಬಾಡಿ, ಸುರೇಶ ನಾಯ್ಕ, ಶಿವಾನಂದ ತಾನಸಿ, ಶರತ ಕುಮಾರ ಬಿ.ಎಸ್. ಪಾಲ್ಗೊಂಡಿದ್ದರು.