ಕಾರವಾರ: ಎರಡು ದಿನದ ಹಿಂದೆ ಹೆರಿಗೆಯಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಖಾಸಗಿ ಆಸ್ಪತ್ರೆಗೆ ಮುತ್ತಿಗೆ ಹಾಕಿ ಮೃತಳ ಸಂಬಂಧಿಕರು ಪ್ರತಿಭಟನೆ ನಡೆಸಿರುವ ಘಟನೆ ಕುಮಟಾ ಪಟ್ಟಣದಲ್ಲಿ ನಡೆಯಿತು.
ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಪ್ರತಿಭಟನೆ - woman died due to doctor negligence
ವೈದ್ಯರ ನಿರ್ಲಕ್ಷದಿಂದಲೇ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತಳ ಸಂಬಂಧಿಕರು ಕುಮಟಾ ಖಾಸಗಿ ಆಸ್ಪತ್ರೆಯೊಂದಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಮಟಾ ಖಾಸಗಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ
ಜಯಮಾಲ ಲೋಕೇಶ ಮೀರ್ಜಾನಕರ್(23) ಮೃತ ಮಹಿಳೆ. ಕಳೆದ ಎರಡು ದಿನದ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದ ಇವರು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮೃತಳ ಕುಟುಂಬಸ್ಥರು, ಆಸ್ಪತ್ರೆಗೆ ಮುತ್ತಿಗೆ ಹಾಕಿ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನ ಸಮಾಧಾನಪಡಿಸಿದರು. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ದಾವಣಗೆರೆ: ಅಪ್ರಾಪ್ತೆ ಜೊತೆ ಹಸೆಮಣೆ ಏರಿದ್ದ ಯುವಕನ ಬಂಧನ