ಕರ್ನಾಟಕ

karnataka

ETV Bharat / state

'ವೃಕ್ಷಮಾತೆ' ತುಳಸಿಗೌಡರಿಗೆ ದೆಹಲಿಗೆ ತೆರಳಲು ವ್ಯವಸ್ಥೆ ಕಲ್ಪಿಸದ ಜಿಲ್ಲಾಡಳಿತ, ಸ್ಥಳೀಯರ ಅಸಮಾಧಾನ - ತುಳುಸಿ ಗೌಡ ನಿರ್ಲಕ್ಷಿಸಿದ ಜಿಲ್ಲಾಡಳಿತ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿಯ ತುಳಸಿಗೌಡ ಅವರಿಗೆ ಹೊತ್ತಿನ ಊಟಕ್ಕೂ ಕಷ್ಟಪಡುವ ಪರಿಸ್ಥಿತಿ ಇದೆ. ಆದರೆ, ಅಕ್ಟೋಬರ್ ತಿಂಗಳಿನಲ್ಲಿಯೇ ಪ್ರಶಸ್ತಿ ಘೋಷಣೆಯಾಗಿದ್ದರೂ ಕೂಡ ಜಿಲ್ಲಾಡಳಿತ ನವದೆಹಲಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳಲು ಯಾವುದೇ ವ್ಯವಸ್ಥೆ ಮಾಡಿಕೊಟ್ಟಿಲ್ಲ.

district-administration-ignored-tulasi-gowda
ತುಳಸಿಗೌಡ

By

Published : Nov 11, 2021, 6:21 PM IST

ಕಾರವಾರ: ಲಕ್ಷಾಂತರ ಗಿಡಗಳನ್ನು ಹೆಮ್ಮರವಾಗಿಸಿದ ತುಳಸಿಗೌಡ (Tulasi Gowda) ಅವರಿಗೆ ಸರ್ಕಾರ ಪದ್ಮಶ್ರೀ ಪ್ರಶಸ್ತಿ (Padmashri award) ನೀಡಿ ಗೌರವ ನೀಡಿದೆ. ಇದಕ್ಕೆ ದೇಶವೇ ಹೆಮ್ಮೆ ಪಡುತ್ತಿದೆ. ಆದರೆ, ಅವರಿಗೆ ಪ್ರಶಸ್ತಿ ಸ್ವೀಕಾರಕ್ಕೆ ತೆರಳಲು ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ ಯಾವುದೇ ವ್ಯವಸ್ಥೆ ಮಾಡದಿರುವುದು ಸ್ಥಳೀಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.


ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿಯ ತುಳಸಿಗೌಡ ಅವರಿಗೆ ಹೊತ್ತಿನ ಊಟಕ್ಕೂ ಕಷ್ಟಪಡುವ ಪರಿಸ್ಥಿತಿ ಇದೆ. ಆದರೆ, ಅಕ್ಟೋಬರ್ ತಿಂಗಳಿನಲ್ಲಿಯೇ ಪ್ರಶಸ್ತಿ ಘೋಷಣೆಯಾಗಿದ್ದರೂ ಕೂಡ ಜಿಲ್ಲಾಡಳಿತ ನವದೆಹಲಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳಲು ಯಾವುದೇ ವ್ಯವಸ್ಥೆ ಮಾಡಿಕೊಟ್ಟಿಲ್ಲ.

ಕೊನೆಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳಲು ಕಾರು ಹಾಗೂ ಅಲ್ಲಿಂದ ದೆಹಲಿಗೆ ತೆರಳಲು ವಿಮಾನದ ಟಿಕೆಟ್ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದಾರೆ.

ಜಿಲ್ಲಾಡಳಿತವಾಗಲಿ, ತಾಲೂಕಾಡಳಿತವಾಗಲಿ ಅವರನ್ನು ಸಂಪರ್ಕ ಕೂಡ ಮಾಡಿರಲಿಲ್ಲ ಎನ್ನಲಾಗಿದೆ. ದೆಹಲಿಗೆ ಹೊರಡುವ ದಿನ ರಾತ್ರಿ ಮಾತ್ರ ಕಾಟಾಚಾರಕ್ಕೆ ತಾಲೂಕಾಡಳಿತದ ಅಧಿಕಾರಿಗಳು ಭೇಟಿ ಮಾಡಿದ್ದರು ಎನ್ನುವ ಆರೋಪಗಳು ಕೇಳಿಬರುತ್ತಿವೆ.

'ತುಳಸಿಗೌಡ ಅವರ ಪರಿಸರ ಕಾಳಜಿಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿರುವುದು ಶ್ಲಾಘನೀಯ. ಆದರೆ, ಅವರಿಗೆ ಪ್ರಶಸ್ತಿ ಸ್ವೀಕರಿಸುವ ವೇಳೆ ದೆಹಲಿಗೆ ಹೋಗಿ ಬರುವ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿಲ್ಲ. ಅವರು ಅಲ್ಲಿಂದ ಬಂದ ನಂತರ ಸನ್ಮಾನ ಮಾಡುವ ಬದಲು, ಮೊದಲೇ ವ್ಯವಸ್ಥೆ ಮಾಡಿದ್ದರೆ ಉತ್ತಮವಾಗಿರುತ್ತಿತ್ತು. ಆದರೆ, ಈ ವಿಚಾರದಲ್ಲಿ ಜಿಲ್ಲಾಡಳಿತ ಎಡವಿದೆ. ಮುಂದೆ ಈ ರೀತಿ ಆಗಬಾರದು' ಎಂದು ಸಾಮಾಜಿಕ ಕಾರ್ಯಕರ್ತ ಮಾಧವ ನಾಯಕ ಅಸಮಾಧಾನ ಹೊರಹಾಕಿದ್ದಾರೆ.

'ನಾವು ತುಳಸಿ ಗೌಡರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಆದರೆ, ತಕ್ಷಣ ಸಮಾರಂಭ ಘೋಷಣೆಯಾಗಿದ್ದರಿಂದ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಅವರು ಬೆಂಗಳೂರಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಜಿಲ್ಲೆಗೆ ಬರುವಾಗ ಗೌರವಪೂರ್ವಕವಾಗಿ ಸ್ವಾಗತಿಸಿ ಜಿಲ್ಲಾಡಳಿತದಿಂದ ಅದ್ಧೂರಿಯಾಗಿ ಗೌರವಿಸುವುದು ನಮ್ಮ ಕರ್ತವ್ಯ' ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಇದನ್ನೂ ಓದಿ:ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ವೃಕ್ಷಮಾತೆ ಅಂಕೋಲದ ತುಳಸಿ ಗೌಡ

ABOUT THE AUTHOR

...view details