ಕಾರವಾರ: 108 ತುರ್ತು ಸೇವೆಯಲ್ಲಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಂದುವರಿದ ರಾಷ್ಟ್ರಗಳಲ್ಲಿನ ಸೇವೆಗಳ ಬಗ್ಗೆ ವರದಿ ನೀಡಲು ತಾಂತ್ರಿಕ ಸಮಿತಿ ರಚಿಸಲಾಗಿದ್ದು, ವರದಿ ಆಧಾರದ ಮೇಲೆ ಮಾದರಿ ಆ್ಯಂಬುಲೆನ್ಸ್ ಸೇವೆ ರಾಜ್ಯದಲ್ಲಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, 108 ತುರ್ತು ಆ್ಯಂಬುಲೆನ್ಸ್ ಸೇವೆ 2006-07 ರಲ್ಲಿ ಪ್ರಾರಂಭವಾಗಿತ್ತು. ಆದರೆ, ಆಗ ಟೆಂಡರ್ ಮೂಲಕ ನಿರ್ವಹಣೆಗೆ ನೀಡಿರಲಿಲ್ಲ. ಸತ್ಯಂ ಅನ್ನುವ ಸಂಸ್ಥೆಗೆ ನಿರ್ವಹಣೆಗೆ ನೀಡಲಾಗಿತ್ತು. ಅಂದು ಯಾವುದೇ ಸಮಸ್ಯೆ ಇರಲಿಲ್ಲ ಆದರೇ ಸತ್ಯಂ ಸಂಸ್ಥೆ ಲಾಸ್ ಆದ ಬಳಿಕ ಜಿ.ವಿ.ಕೆ ಎಂಬ ಸಂಸ್ಥೆಗೆ ನಿರ್ವಹಣೆಗೆ ವಹಿಸಿಕೊಡಲಾಗಿತ್ತು. ಮೊದ ಮೊದಲು ಸರಿಯಾಗಿ ನಡೆಸುತ್ತಿದ್ದ ಸಂಸ್ಥೆ ಇತ್ತೀಚೆಗೆ ಸೇವೆ ಸರಿಯಾಗಿ ನೀಡುತ್ತಿಲ್ಲ.