ಶಿರಸಿ: ರಾಜ್ಯ ನಾಟಕ ಅಕಾಡೆಮಿ ಸದಸ್ಯ ಶಿರಸಿಯ ಕಾನಕೊಡ್ಲಿನ ಕೆ.ಆರ್. ಪ್ರಕಾಶ್ (50) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನ ಹೊಂದಿದ್ದಾರೆ.
ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೆ.ಆರ್. ಪ್ರಕಾಶ್ ವಿಧಿವಶ - k r prakash death news
ರಾಜ್ಯ ನಾಟಕ ಅಕಾಡೆಮಿ ಸದಸ್ಯ ಶಿರಸಿಯ ಕಾನಕೊಡ್ಲಿನ ಕೆ.ಆರ್. ಪ್ರಕಾಶ್ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ.
ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೆ.ಆರ್. ಪ್ರಕಾಶ್ ನಿಧನ!
ನೂರಕ್ಕೂ ಹೆಚ್ಚು ನಾಟಕಗಳಿಗೆ ಅವರು ನಿರ್ದೇಶನ ಮಾಡಿದ್ದರು. ಬೆಟ್ಟ, ನದಿ ಪ್ರದೇಶಗಳಲ್ಲಿ ನಾಟಕ ಪ್ರದರ್ಶನ ಆಯೋಜಿಸುವ ಮೂಲಕ ಹೊಸತನ ಸೃಷ್ಟಿಸಿದ ರಂಗಕರ್ಮಿ ಎಂಬ ಖ್ಯಾತಿಗೆ ಪಾತ್ರರಾಗಿದ್ದರು.
ಕೆಲ ವರ್ಷಗಳ ಕಾಲ ಶಿರಸಿಯಲ್ಲಿ ಪತ್ರಕರ್ತರಾಗಿ ಕೆಲಸ ನಿರ್ವಹಿಸಿದ್ದರು. ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಆಗಿಯೂ ಸೇವೆ ಸಲ್ಲಿಸಿದ್ದರು. ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಸದ್ಯ ಪತ್ನಿ, ಪುತ್ರ ಸೇರಿದಂತೆ ಅಪಾರ ಹಿತೈಷಿಗಳನ್ನು ಅಗಲಿದ್ದಾರೆ.