ಕರ್ನಾಟಕ

karnataka

ETV Bharat / state

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ... ಲಕ್ಷಾಂತರ ರೂ. ಮೌಲ್ಯದ ಆಸ್ತಿ ನಷ್ಟ

ಕಾರವಾರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ ನಿಂದ ಮನೆಗೆ ಬೆಂಕಿ ಬಿದ್ದು, ಲಕ್ಷಾಂತರ ರೂ. ಮೌಲ್ಯದ ಆಸ್ತಿ ನಷ್ಟವಾದ ಘಟನೆ ನಡೆದಿದೆ.

ಆಸ್ತಿ ನಷ್ಟ

By

Published : Oct 29, 2019, 3:15 PM IST

ಕಾರವಾರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ತಗುಲಿ ಟಿವಿ, ಫ್ರಿಡ್ಜ್​ ಸೇರಿದಂತೆ ಗೃಹಪಯೋಗಿ ವಸ್ತುಗಳು ಭಸ್ಮವಾಗಿರುವ ಘಟನೆ, ಅಂಕೋಲ ತಾಲೂಕಿನ ಹಾರವಾಡ ಸೀರ್ಬಡ್ ಕಾಲೋನಿಯಲ್ಲಿ ನಡೆದಿದೆ.

ಪಾಂಡುರಂಗ ಅಂಬಿಗ ಎಂಬವರ ಮನೆಯಲ್ಲಿ ತಡರಾತ್ರಿ ವಿದ್ಯುತ್ ಅಧಿಕ ಪ್ರಸರಣವಾದ ಹಿನ್ನೆಲೆ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದೆ. ಈ ವೇಳೆ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್​, ಅಕ್ಕಿ, ಬಟ್ಟೆ ಸೇರಿದಂತೆ ಗೃಹಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.

ಲಕ್ಷಾಂತರ ರೂ. ಮೌಲ್ಯದ ಆಸ್ತಿ ನಷ್ಟ

ಸಿಲಿಂಡರ್​ಗೆ ಕೂಡ ಬೆಂಕಿ ಹೊತ್ತಿತ್ತಾದರೂ ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಂಕೋಲ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹಾಜರಾಗಿ ಘಟನೆಯ ವಿವರಣೆ ಪಡೆದರು.

ABOUT THE AUTHOR

...view details