ಭಟ್ಕಳ:ಭಟ್ಕಳದಲ್ಲಿ ದೀರ್ಘಕಾಲೀನ ಶಾಂತಿ ಸುವ್ಯವಸ್ಥೆ ಸ್ಥಾಪನೆಗೆ ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಇಂದು ಭಟ್ಕಳಕ್ಕೆ ಭೇಟಿ ನೀಡಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಂದ ಅಹವಾಲು ಆಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಯಾವುದೇ ಪಕ್ಷದ ವತಿಯಿಂದ ಮೆರವಣಿಗೆ ನಡೆಸಬೇಕಾದರೂ ಪರವಾನಗಿ ಪಡೆದುಕೊಳ್ಳಬೇಕು. ನೀತಿ ಸಂಹಿತೆ ಜಾರಿಯಲ್ಲಿ ಇದ್ದ ಅವಧಿಯಲ್ಲಿಯೇ ಮೆರವಣಿಗೆ ನಡೆಸಿದ ಒಂದೆರಡು ಘಟನೆಯ ಬಗ್ಗೆ ಮಾಹಿತಿ ಲಭಿಸಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುವುದು. ಶಾಂತಿಯುತ ಚುನಾವಣೆ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಗಾಂಜಾ ಸಾಗಾಟ, ಮಾರಾಟ, ಸೇವನೆಯ ಬಗ್ಗೆಯೂ ನಿಗಾ ವಹಿಸಲಾಗುತ್ತದೆ. ಭಟ್ಕಳದಲ್ಲಿ ಟ್ರಾಫಿಪ್ ಪೊಲೀಸ್ ಸ್ಟೇಶನ್ ಸ್ಥಾಪನೆಯ ಸಂಬಂಧ ಪ್ರಸ್ತಾವನೆಯನ್ನು ಪಡೆದು ಸರ್ಕಾರಕ್ಕೆ ಬರೆದುಕೊಳ್ಳಲಾಗುವುದು ಎಂದು ವಿವರಿಸಿದರು.