ಭಟ್ಕಳ: ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ, ಇಂದು ಬೆಳಗಿನ ಜಾವ ಪಟ್ಟಣದ ನಿಶಾತ್ ನರ್ಸಿಂಗ್ ಹೋಮ್ ಸಮೀಪ ನಡೆದಿದೆ.
ಭಟ್ಕಳದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರಿ ಅನಾಹುತ - ಗ್ಯಾಸ್ ಟ್ಯಾಂಕರ್ ಪಲ್ಟಿ ಸುದ್ಧಿ
ಗೋವಾದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಹಿಂದುಸ್ಥಾನ ಪೆಟ್ರೋಲಿಯಂ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿನ ಹೊಂಡಕ್ಕೆ ಪಲ್ಟಿಯಾಗಿದೆ. ಟ್ಯಾಂಕರ್ ಖಾಲಿ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಚಾಲಕ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
![ಭಟ್ಕಳದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರಿ ಅನಾಹುತ tanker-fell-down](https://etvbharatimages.akamaized.net/etvbharat/prod-images/768-512-9168357-144-9168357-1602648125490.jpg)
ಟ್ಯಾಂಕರ್ ಪಲ್ಟಿ
ಗೋವಾದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಹಿಂದುಸ್ಥಾನ ಪೆಟ್ರೋಲಿಯಂ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿನ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಟ್ಯಾಂಕರ್ ಖಾಲಿ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಚಾಲಕ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಭಟ್ಕಳದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಟ್ಯಾಂಕರ್ ಬಿದ್ದ ಸ್ಥಳದ ಸಮೀಪದಲ್ಲೇ ಸಾಕಷ್ಟು ಮನೆಗಳು, ಖಾಸಗಿ ಆಸ್ಪತ್ರೆ, ಹೋಟೆಲ್, ಬ್ಯಾಂಕ್, ಪೋಸ್ಟ್ ಆಫೀಸ್, ಗ್ಯಾರೇಜ್ಗಳಿದ್ದು, ಅನಿಲ ಇಲ್ಲದ ಖಾಲಿ ಟ್ಯಾಂಕರ್ ಆಗಿರುವುದರಿಂದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.