ಶಿರಸಿ: ದೆಹಲಿ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡವರ ವಿಚಾರದಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸಂದೇಶ ಹಾಕಿ ಜನರಲ್ಲಿ ಭೀತಿ ಉಂಟು ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಎಚ್ಚರ... ಎಚ್ಚರ.. ಕೊರೊನಾ ಕುರಿತು ಸುಳ್ಳು ಸುದ್ದಿ : ಇಬ್ಬರ ಬಂಧನ - ಕೊರೊನಾ ಕುರಿತು ಸುಳ್ಳು ಸುದ್ದಿ
ಕೊರೊನಾ ಸೋಂಕಿನ ಕುರಿತು ಸುಳ್ಳು ಸುದ್ದಿ ಹರಿಬಿಟ್ಟಿದ್ದ ಇಬ್ಬರನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ.
ಕೊರೊನಾ ಕುರಿತು ಸುಳ್ಳು ಸುದ್ದಿ
ದಾಂಡೇಲಿಯ ವಿನಾಯಕ ಚವ್ಹಾಣ ಹಾಗೂ ವೆಂಕಟೇಶ ಪ್ರಸಾದ ಬಂಧಿತ ಆರೋಪಿಗಳಾಗಿದ್ದಾರೆ. ‘ಸುಭಾಶ ನಗರದ ಓರ್ವ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ದಾಂಡೇಲಿ ಸರಕಾರಿ ಆಸ್ಪತ್ರೆಯಲ್ಲಿ ಘೋಷಿಸಲಾಗಿದೆ’ ಎಂಬ ಸುಳ್ಳು ಸಂದೇಶವನ್ನು ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.
ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.