ಕಾರವಾರ:ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಜೇನು ನೊಣಗಳ ಹಿಂಡು ಕಡಿದು ಆಸ್ಪತ್ರೆಗೆ ದಾಖಲಾಗಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕುಮಟಾ ತಾಲೂಕಿನ ತದಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಜೇನು ನೊಣಗಳ ದಾಳಿ: ಚಿಕಿತ್ಸೆ ಫಲಕಾರಿಯಾಗದೆ ರೈತ ಸಾವು - farmer death
ಜೇನು ನೊಣಗಳು ಕಡಿದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ರೈತ ರಮೇಶ ನಾಯ್ಕ ಮೃತ ದೇಹ
ತದಡಿಯ ರಮೇಶ ನಾಯ್ಕ (65) ಮೃತ ವ್ಯಕ್ತಿ. ಕಳೆದ ಎರಡು ದಿನಗಳ ಹಿಂದೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಘಟನೆ ನಡೆದಿತ್ತು. ತಕ್ಷಣ ಅವರನ್ನು ಕುಮಟಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.