ಶಿರಸಿ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಶಿರಸಿಯ ಯಲ್ಲಾಪುರ ರಸ್ತೆಯಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಗೆ ಬೆಂಕಿ: ಲಕ್ಷಾಂತರ ರೂಪಾಯಿ ಹಾನಿ - ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಇಲೆಕ್ಟ್ರಾನಿಕ್ ಅಂಗಡಿಗೆ ಬೆಂಕಿ
ಶಿರಸಿಯಲ್ಲಿ ನ್ಯೂ ಐಟಿ ಮಾರ್ಟ್ ಎಂಬ ಅಂಗಡಿಗೆ ಬೆಂಕಿ ತಗುಲಿ, ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯುಂಟಾಗಿದೆ.
ಇಲೆಕ್ಟ್ರಾನಿಕ್ ಅಂಗಡಿಗೆ ಬೆಂಕಿ
ಅಭಿಜಿತ್ ಎಂಬುವರಿಗೆ ಸೇರಿದ ನ್ಯೂ ಐಟಿ ಮಾರ್ಟ್ ಎಂಬ ಅಂಗಡಿಗೆ ಬೆಂಕಿ ತಗುಲಿ, ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯುಂಟಾಗಿದೆ. ಮಾರಾಟಕ್ಕೆ ಇಟ್ಟಿದ್ದ ಹಾಗೂ ರಿಪೇರಿಗೆ ಬಂದಂಥ ಹತ್ತಾರು ಲ್ಯಾಪ್ ಟಾಪ್ಗಳು ಸುಟ್ಟು ಕರಕಲಾಗಿವೆ.
ಬೆಂಕಿ ತಗುಲಿದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಶಿರಸಿ ಮಾರುಕಟ್ಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.