ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯ ಅಭಿಲೇಖಾಲಯದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೂರು ಮಹಡಿಯ ಕಟ್ಟಡ ಹೊತ್ತಿ ಉರಿದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಕಾರವಾರದ ಜಿಲ್ಲಾ ಪಂಚಾಯಿತಿ ಹಿಂಭಾಗದಲ್ಲಿರುವ ಅಭಿಲೇಖಾಲಯದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಬೆಂಕಿ ಕಟ್ಟಡದ ಮೂರು ಮಹಡಿಗೂ ಆವರಿಸಿದೆ. ಕಟ್ಟಡದಲ್ಲಿ ಜಿಲ್ಲಾ ಪಂಚಾಯಿತಿಯ ದಾಖಲಾತಿಗಳನ್ನು ಇಡಲಾಗಿದ್ದು, ಕೆಲವು ದಾಖಲಾತಿಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ.