ಕರ್ನಾಟಕ

karnataka

ETV Bharat / state

ಉತ್ತರಕನ್ನಡದಲ್ಲಿ ಬ್ಲ್ಯಾಕ್ ಫಂಗಸ್​ಗೆ ಮೊದಲ ಬಲಿ! - ಬ್ಲ್ಯಾಕ್ ಫಂಗಸ್ ರೋಗ ಲಕ್ಷಣ

ರೋಗ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಂಕಿತನನ್ನು ಹೆಚ್ಚಿನ ಚಿಕಿತ್ಸೆ ಹಾಗೂ ರೋಗ ಪತ್ತೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ, ಡಯಾಬಿಟಿಸ್, ನ್ಯುಮೋನಿಯಾ, ಹೈಪರ್ ಟೆನ್ಶನ್‌ ಖಾಯಿಲೆಯಿಂದ ಬಳಲುತ್ತಿದ್ದ ಸೋಂಕಿತನಿಗೆ ಭಾನುವಾರ ಬ್ಲ್ಯಾಕ್ ಫಂಗಸ್​ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು

first death for black fungus in uttara kannada
first death for black fungus in uttara kannada

By

Published : Jun 2, 2021, 7:40 PM IST

ಕಾರವಾರ (ಉತ್ತರ ಕನ್ನಡ): ಉತ್ತರಕನ್ನಡ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ತುತ್ತಾಗಿ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಬ್ಯ್ಲಾಕ್ ಫಂಗಸ್​ಗೆ ಮೊದಲ ಸಾವು ಸಂಭವಿಸಿದಂತಾಗಿದೆ.

ಕಾರವಾರ ತಾಲೂಕಿನ ಸದಾಶಿವಗಡ ಮೂಲದ 60 ವರ್ಷದ ಕೊರೊನಾ ಸೋಂಕಿತ ಸೋಮವಾರ ಮೃತಪಟ್ಟಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮೇ.28 ರಂದು ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ರೋಗ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಂಕಿತನನ್ನು ಹೆಚ್ಚಿನ ಚಿಕಿತ್ಸೆ ಹಾಗೂ ರೋಗ ಪತ್ತೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಿಡ್ನಿ, ಡಯಾಬಿಟಿಸ್, ನ್ಯುಮೋನಿಯಾ, ಹೈಪರ್ ಟೆನ್ಶನ್‌ ಖಾಯಿಲೆಯಿಂದ ಬಳಲುತ್ತಿದ್ದ ಸೋಂಕಿತನಿಗೆ ಭಾನುವಾರ ಬ್ಲ್ಯಾಕ್ ಫಂಗಸ್​ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು ಎನ್ನಲಾಗಿದೆ. ಆದರೆ ಸೋಮವಾರ ಮೃತಪಟ್ಟಿರುವ ಬಗ್ಗೆ ಜಿಲ್ಲಾಡಳಿತ ಖಚಿತಪಡಿಸಿದೆ.

ABOUT THE AUTHOR

...view details