ಕರ್ನಾಟಕ

karnataka

ETV Bharat / state

ಕಾರವಾರ ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ 8ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ... - 8ನೇ ದಿನಕ್ಕೆ ಕಾಲಿಟ್ಟ ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಪ್ರತಿಭಟನೆ...

ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಉತ್ತರಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಮೀನುಗಾರರು ನಡೆಸುತ್ತಿರುವ ಹೋರಾಟ ಎಂಟನೇ ದಿನಕ್ಕೆ ಕಾಲಿಟ್ಟಿದೆ.

Fisherman protest against state and central government
ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಪ್ರತಿಭಟನೆ

By

Published : Jan 20, 2020, 3:29 PM IST

ಕಾರವಾರ:ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮೀನುಗಾರರು ನಡೆಸುತ್ತಿರುವ ಹೋರಾಟ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಈ ಪ್ರತಿಭಟನೆಗೆ ಇಂದು ಕರ್ನಾಟಕ ರೈತ ಸಂಘ, ಜಯ ಕರ್ನಾಟಕ ಸಂಘಟನೆಗಳ ಜೊತೆಗೆ ಆಟೋ, ಟೆಂಪೋ ಚಾಲಕರು ಸಾಥ್ ನೀಡಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಸಾಗರಮಾಲಾ ಯೋಜನೆ ಬೇಡ. ಕಡಲತೀರ ಉಳಿಸಿ ಎಂದು ಒತ್ತಾಯಿಸಿದರು. ಮೀನುಗಾರಿಕೆ ಹಾಗೂ ಮೀನು ಮಾರಾಟ ಸ್ಥಗಿತಗೊಳಿಸಿ ಮೀನುಗಾರರು ಧರಣಿ ನಡೆಸುತ್ತಿದ್ದಾರೆ.

ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಪ್ರತಿಭಟನೆ

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಹರೀಶ್​ಕುಮಾರ್, ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆಯಿಂದ ಮೀನುಗಾರರಿಗೆ ಆಗುವ ತೊಂದರೆ ಕುರಿತು ಸಂಬಂಧಪಟ್ಟ ಸಚಿವರಿಗೆ ಮನವರಿಕೆ ಮಾಡಲಾಗಿದೆ. ಅದರಂತೆ ಕಾಮಗಾರಿ ನಿಲ್ಲಿಸಿದ್ದೇವೆ. ಸಚಿವರು ಮೀನುಗಾರರ ಮುಖಂಡರೊಂದಿಗೆ ಸಭೆ ನಡೆಸಲು ಮುಂದಾಗಿದ್ದಾರೆ. ನೀವು ಒಪ್ಪಿದ ತಕ್ಷಣವೇ ಸಭೆ ಆಯೋಜಿಸಲಾಗುವುದು ಎಂದು ಭರವಸೆ ನೀಡಿದ ಅವರು, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.

ABOUT THE AUTHOR

...view details